ಜ್ಞಾನೋದಯ ಹೊಂದಿದ ಚಿತ್ರದ ಮುದುಕ

zen story

ಮ್ಮೆ ಶಿಷ್ಯ , ಒಂದು ಮೆಥೊಡಿಸ್ಟ್ ಚರ್ಚ್ ದಾಟಿ ಮನೆಗೆ ವಾಪಸ್ಸಾಗುತ್ತಿದ್ದಾಗ, ಚರ್ಚ್’ನ ಅಂಗಳದಲ್ಲಿ ಝೆನ್ ಮಾಸ್ಟರ್ ಚಿತ್ರಕ್ಕೆ ಬಣ್ಣ ತುಂಬುತ್ತಾ ಕುಳಿತದ್ದನ್ನು ಕಂಡ. ಹತ್ತಿರ ಹೋಗಿ ನೋಡಿ ಆಶ್ಚರ್ಯಚಕಿತನಾದ. ಮಾಸ್ಟರ್, ಚರ್ಚ್’ನ ಚಿತ್ರ ಬಿಡಿಸುತ್ತಿರಲಿಲ್ಲ, ಬದಲಾಗಿ ಚೀನಾ ದೇಶದ ಪ್ರಕೃತಿ ಚಿತ್ರ ಬಿಡಿಸುತ್ತಿದ್ದ.

ಆ ಚಿತ್ರದಲ್ಲಿ ದೊಡ್ಡ ಪರ್ವತ ಶ್ರೇಣಿ, ನದಿ, ಸುಂದರ ಜಲಪಾತ ಮತ್ತು ತನ್ನ ಪುಟ್ಟ ಗುಡಿಸಲಿನ ಮುಂದೆ ಕಸ ಗುಡಿಸುತ್ತಿದ್ದ ಗೂನು ಬೆನ್ನಿನ ಹಸನ್ಮುಖಿ ಮುದುಕ.

ಶಿಷ್ಯ : ಏನು ಚಿತ್ರ ಇದು ಮಾಸ್ಚರ್ ?
ಮಾಸ್ಟರ್ : ಕೆಲವು ಕ್ಷಣಗಳ ಹಿಂದೆಯಷ್ಟೆ ಈ ಮುದುಕನಿಗೆ ಜ್ಞಾನೋದಯವಾಗಿದೆ.
ಶಿಷ್ಯ : ಮುಂದೆ ಏನು ಮಾಡುತ್ತಾನೆ ಮುದುಕ?
ಮಾಸ್ಟರ್ : ಅದನ್ನೆ ನೋಡುತ್ತಿದ್ದೆ. ಆತ ಕಸ ಗುಡಿಸುವುದನ್ನು ಮುಂದುವರೆಸಿದ್ದಾನೆ. 

(ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ)

 

Leave a Reply