ಮೂಲ: ಲಾವೋ ತ್ಸು | ಕನ್ನಡಕ್ಕೆ : ಚಿದಂಬರ ನರೇಂದ್ರ
ನೋಡಿದರೆ ಕಾಣಿಸದು
ಕೇಳಿದರೆ ಕೇಳಿಸದು
ಮುಟ್ಟಿದರೆ ನಿಲುಕದು
ಇನ್ನೂ ಮುಂದೆ ವರ್ಣಿಸುವುದು
ಆಗದ ಮಾತು
ಅಂತೆಯೇ ಇದು ಮೂರಲ್ಲ, ಒಂದು.
ತಲೆ ಮೇಲೆ ಬೆಳಕಿಲ್ಲ
ಕಾಲ ಕೆಳಗೆ ಕತ್ತಲೆಯಿಲ್ಲ
ಆರಂಭ, ಕೊನೆ, ಹೆಸರು ಒಂದೂ ಇಲ್ಲ.
ರೂಹಿಲ್ಲದ ರೂಹು
ಪ್ರತಿಬಂಬವಿಲ್ಲದ ಬಿಂಬ
ಕಾಣಿಸದಷ್ಟು ಸೂಕ್ಷ್ಮ, ಕಾಣದಷ್ಟು ಅಪಾರ
ಶುರುವಿನ ಗೆರೆಯಿಲ್ಲ, ಮುಟ್ಟುವ ದಾರವಿಲ್ಲ
ರುಚಿ ಬಲ್ಲವರಿಲ್ಲ
ಆದರೂ ರುಚಿ ಆದವರು ಸಾಕಷ್ಟು
ದಾರಿಯಲ್ಲಿ ಹೆಜ್ಜೆ ಹಾಕುತ್ತ ಹೋದಂತೆ
‘ಸಧ್ಯ’ ಜೊತೆಯಾಗುತ್ತ ಹೋಗುತ್ತದೆ.