ಹೇಗೆ ಹತೋಟಿಗೆ ಬರುತ್ತೆ ಆ ಸಿಟ್ಟು?

 

tao

ಮ್ಮೆ ಶಿಷ್ಯನೊಬ್ಬ ಝೆನ್ ಮಾಸ್ಟರ್ ಬಳಿ ಹೋಗಿ ಅವರ ಸಲಹೆ ಕೇಳಿದ.
“ಮಾಸ್ಟರ್, ನನ್ನ ಸಿಟ್ಟು ಹತೋಟಿಗೆ ಸಿಗುವುದಿಲ್ಲ, ಏನಾದರೂ ಉಪಾಯ ಹೇಳಿ”

ಮಾಸ್ಟರ್ : ಹಂ, ಇದೇನೋ ವಿಚಿತ್ರವಾಗಿದೆಯಲ್ಲ, ಎಲ್ಲಿ ಒಮ್ಮೆ ನಿನ್ನ ಸಿಟ್ಟು ತೋರಿಸು, ಹೇಗಿದೆ ನೋಡೋಣ.
ಶಿಷ್ಯ : ಆದರೆ ಮಾಸ್ಟರ್, ನನಗೀಗ ಸಿಟ್ಟು ಬಂದಿಲ್ಲ, ಹೇಗೆ ತೋರಿಸಲಿ?
ಮಾಸ್ಟರ್ : ಹಾಗಾದ್ರೆ ಯಾವಾಗ ತೋರಸ್ತೀಯಾ?
ಶಿಷ್ಯ : ಅಯ್ಯೋ ಅದು ಹಾಗೆ ಹೇಳಕ್ಕಾಗಲ್ಲ, ಅಚಾನಕ್ ಆಗಿ ಬರತ್ತೆ.
ಮಾಸ್ಟರ್ : ಹಾಗಾದ್ರೆ ಅದು ನಿನ್ನ ಸ್ವಂತದ್ದಲ್ಲ. ಸ್ವಂತದ್ದಾಗಿದ್ರೆ ಕೇಳಿದಾಗೆಲ್ಲ ತೋರಿಸಬಹುದಾಗಿತ್ತು ನೀನು. ಅದು ಹುಟ್ಟಿನಿಂದ ಬಂದದ್ದಲ್ಲ, ಅಪ್ಪ ಅಮ್ಮ ಕೊಟ್ಟಿದ್ದಲ್ಲ. ನಿನ್ನದಲ್ಲ ಅಂದ ಮೇಲೆ ನಿನ್ನ ಹತೋಟಿಗೆ ಹೇಗೆ ಬರತ್ತೆ ಆ ಸಿಟ್ಟು?

ಈ ಸಮಜಾಯಿಶಿ ಕೇಳಿ ಶಿಷ್ಯ ಕುಣಿದು ಕುಪ್ಪಳಿಸಿಬಿಟ್ಟ.

(ಸಂಗ್ರಹಾನುವಾದ: ಚಿದಂಬರ ನರೇಂದ್ರ)

Leave a Reply