ಸಹಜ ಧರ್ಮವನ್ನು ಕಾಪಾಡುವುದು…

scorpio

ಬ್ಬರು ಝೆನ್ ಸನ್ಯಾಸಿಗಳು ನದಿಯಲ್ಲಿ ತಮ್ಮ ಊಟದ ತಟ್ಚೆ ತೊಳೆಯುತ್ತಿದ್ದಾಗ ಒಂದು ಚೇಳು ನದಿಯಲ್ಲಿ ಕೊಚ್ಚಿಕೊಂಡು ಹೋಗುವುದನ್ನು ಕಂಡರು.

ಥಟ್ಚನೆ ಒಬ್ಬ ಸನ್ಯಾಸಿ ಅದನ್ನು ನದಿಯಿಂದ ಹೊರ ತೆಗೆದು ದಂಡೆಯ ಮೇಲೆ ಬಿಟ್ಟ. ಹೀಗೆ ಮಾಡುವಾಗ ಚೇಳು ಸನ್ಯಾಸಿಯ ಬೆರಳಿಗೆ ಕಚ್ಚಿಬಿಟ್ಟಿತು. ಸನ್ಯಾಸಿ ತಲೆ ಕೆಡಿಸಿಕೊಳ್ಳದೆ ಮತ್ತೆ ತಟ್ಟೆ ತೊಳೆಯುವುದನ್ನು ಮುಂದುವರೆಸಿದ. ಆ ಚೇಳು ಮತ್ತೆ ಜಾರಿ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗತೊಡಗಿತು. ಆ ಸನ್ಯಾಸಿ ಮತ್ತೆ ಆ ಚೇಳನ್ನು ಎತ್ತಿ ದಂಡೆಯ ಮೇಲೆ ಬಿಟ್ಟ. ಆ ಚೇಳು ಮತ್ತೆ ಆ ಸನ್ಯಾಸಿಯ ಬೆರಳನ್ನು ಕಚ್ಚಿತು.

ಇದನ್ನೆಲ್ಲ ಗಮನಿಸುತ್ತಿದ್ದ ಇನ್ನೊಬ್ಬ ಸನ್ಯಾಸಿ ಕೇಳಿದ,
“ಗೆಳೆಯಾ, ಕಚ್ಚುವುದು ಚೇಳಿನ ಸಹಜ ಧರ್ಮ, ಅದನ್ನು ಯಾಕೆ ಕಾಪಾಡುತ್ತಿದ್ದೀಯಾ?”

ಮೊದಲ ಸನ್ಯಾಸಿ ಉತ್ತರಿಸಿದ, “ಗೆಳೆಯಾ, ನಾನು ಚೇಳನ್ನು ಕಾಪಾಡುತ್ತಿಲ್ಲ, ನನ್ನ ಸಹಜ ಧರ್ಮವನ್ನು ಕಾಪಾಡುತ್ತಿದ್ದೇನೆ”

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

Leave a Reply