ಒಬ್ಬ ಝೆನ್ ವಿದ್ಯಾರ್ಥಿಗೆ ಮಾರ್ಶಲ್ ಆರ್ಟ್ ನ ಹುಚ್ಚು.
ಝೆನ್ ಜೊತೆಜೊತೆಗೆ ಯುದ್ಧಕಲೆಯನ್ನೂ ಅಭ್ಯಾಸ ಮಾಡುತ್ತಿದ್ದ.
ಒಮ್ಮೆ ಅವನಿಗೆ ತನ್ನ ಯುದ್ಧಕಲೆಯನ್ನು ಬಳಸಿ ಗುರುವಿನ ಸಾಮರ್ಥ್ಯ ಪರೀಕ್ಷಿಸುವ ಮನಸ್ಸಾಯಿತು.
ಗುರು ವಿಶ್ರಾಂತಿಯಲ್ಲಿದ್ದಾಗ ಅಚಾನಕ್ ಆಗಿ ಈಟಿಯಿಂದ ಗುರುವಿನ ಮೇಲೆ ಆಕ್ರಮಣ ಮಾಡಿದ.
ಗುರು ಕ್ಷಣಾರ್ಧದಲ್ಲಿ ತನ್ನ ಜಪಮಣಿ ಬಳಸಿ ಈಟಿಯ ದಿಕ್ಕು ಬದಲಾಯಿಸಿದ.
ಶಿಷ್ಯನಿಗೆ ಆಶ್ಚರ್ಯವಾಯಿತು.
ಗುರು ಉತ್ತರ ಕೊಟ್ಚ, “ಹುಡುಗಾ, ನಿನ್ನ ಯುದ್ಧತಂತ್ರ ಪಕ್ವವಾಗಿಲ್ಲ, ಈಟಿಗಿಂತ ಮೊದಲು ನಿನ್ನ ಬುದ್ಧಿ move ಮಾಡಿದ್ದನ್ನ ನಾನು ಗಮನಿಸಿದೆ!:
(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)