ಶಿಷ್ಯನೊಬ್ಬ ಝೆನ್ ಮಾಸ್ಟರ್ ಹತ್ತಿರ, ಒಂದು ದೂರು ತೆಗೆದುಕೊಂಡು ಬಂದ. “ಮಾಸ್ಟರ್, ನನಗೆ ಧ್ಯಾನದಲ್ಲಿ ತುಂಬ ತೊಂದರೆಗಳಾಗುತ್ತಿವೆ. ಧ್ಯಾನಕ್ಕೆ ಕೂತಾಗಲೆಲ್ಲ ವಿಪರೀತ ಕಾಲು ನೋಯುತ್ತದೆ, ನಿದ್ದೆ ಬಂದ ಹಾಗಾಗುತ್ತದೆ. ಬಹಳ ಚಿಂತೆಯಾಗುತ್ತಿದೆ. ಏನು ಮಾಡಲಿ? “
“ಗಾಬರಿ ಬೇಡ, ಎಲ್ಲ ಸರಿ ಹೋಗುತ್ತದೆ” ಮಾಸ್ಟರ್ ಉತ್ತರಿಸಿದ.
ಎರಡು ಮೂರು ತಿಂಗಳುಗಳ ನಂತರ ಶಿಷ್ಯ ವಾಪಸ್ ಬಂದ, “ಮಾಸ್ಟರ್, ಈಗ ಧ್ಯಾನದಲ್ಲಿ ಅದ್ಭುತ ಅನುಭವಗಳಾಗುತ್ತಿವೆ, ತುಂಬ ಎಚ್ಚರದ ಸ್ಥಿತಿ ಅನಿಸುತ್ತಿದೆ. ಎಷ್ಟು ಶಾಂತ, ಎಷ್ಟು ಜೀವಂತಿಕೆಯ ಸ್ಥಿತಿ ಇದು!”
ಮಾಸ್ಟರ್ ಸಾವಧಾನವಾಗಿ ಉತ್ತರಿಸಿದ, “ಗಾಬರಿ ಬೇಡ, ಎಲ್ಲ ಸರಿ ಹೋಗುತ್ತದೆ”
(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)