ತಾವೋ ತಿಳಿವು #39 ~ ಸಂತ ಕಲಿಸುವ ರೀತಿ

ಮೂಲ : ಲಾವೋ ತ್ಸು | ಕನ್ನಡಕ್ಕೆ : ಚಿದಂಬರ ನರೇಂದ್ರ

ಬೆರಗು ಕಳೆದುಕೊಂಡವರು
ಧರ್ಮಕ್ಕೆ ಶರಣಾಗುತ್ತಾರೆ.
ಸ್ವಂತದ ಬಗ್ಗೆ ನಂಬಿಕೆಯಿಲ್ಲದವರು
ಅಧಿಕಾರವನ್ನು ಆಶ್ರಯಿಸುತ್ತಾರೆ.

ಆದ್ದರಿಂದಲೇ ಸಂತ
ಜನರಿಗೆ ಗೊಂದಲವಾಗದಿರಲೆಂದು
ಒಂದು ಹೆಜ್ಜೆ ಹಿಂದೆ ನಿಲ್ಲುತ್ತಾನೆ.
ಅವನು ಕಲಿಸುವ ರೀತಿ ಹೇಗೆಂದರೆ
ಜನರಿಗೆ ಕಲಿಯುವ ಪ್ರಮೇಯವೇ ಇರುವುದಿಲ್ಲ.

Leave a Reply