ಬಂಡೆ ಮನಸ್ಸಿನ ಒಳಗಿದೆಯೋ ಹೊರಗಿದೆಯೋ?

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ

ಬ್ಬ ಝೆನ್ ಮಾಸ್ಟರ್ ಮತ್ತು ಅವನ ಶಿಷ್ಯ ಒಂದು ಪರ್ವತ ಶ್ರೇಣಿಯ ಮೂಲಕ ಹಾಯ್ದು ಮುಂದಿನ ಊರಿಗೆ ಹೋಗುತ್ತಿದ್ದರು.

ದಾರಿಯುದ್ದಕ್ಕೂ ಮಾಸ್ಟರ್ ಮೌನವಾಗಿದ್ದ ಆದರೆ ಅವನ ಶಿಷ್ಯ ಮಾತ್ರ ಝೆನ್ ಬಗ್ಗೆ ಮತ್ತು ಮನಸ್ಸಿನ ಬಗ್ಗೆ ಸತತವಾಗಿ ಮಾತಾನಾಡುತ್ತಲೇ ಇದ್ದ. ಸ್ವಲ್ಪ ದೂರ ಕ್ರಮಿಸಿದ ನಂತರ ಅವರಿಬ್ಬರಿಗೂ ಒಂದು ಭಾರಿ ಬಂಡೆ ಎದುರಾಯಿತು.

ಮಾಸ್ಟರ್ ತನ್ನ ಶಿಷ್ಯನ ತಲೆ ಮೇಲೆ ಕೈಯ್ಯಾಡಿಸುತ್ತ ಕೇಳಿದ, “ ನೋಡು ಆ ಭಾರಿ ಬಂಡೆ ಇದೆಯಲ್ಲಾ, ಅದು ನಿನ್ನ ಮನಸ್ಸಿನ ಒಳಗಿದೆಯೋ ಹೊರಗಿದೆಯೋ?

ಶಿಷ್ಯ ಅತ್ಯಂತ ಆತ್ಮವಿಶ್ವಾಸದಿಂದ ಉತ್ತರಿಸಿದ, “ಝೆನ್ ನಲ್ಲಿ ಎಲ್ಲವೂ ಮನಸ್ಸಿನ ಆಟ, ಮನಸ್ಸು ನಮ್ಮ ಎಲ್ಲ ಕ್ರಿಯೆಗಳನ್ನು ನಿಯಂತ್ರಿಸುತ್ತದೆ, ಆದ್ದರಿಂದ ಖಂಡಿತವಾಗಿ ಬಂಡೆ ನನ್ನ ಮನಸ್ಸಿನ ಒಳಗಿದೆ.

“ಹಾಗಾದರೆ ಭಾರಿ ಬಂಡೆಯನ್ನು ಹೊತ್ತ ನಿನ್ನ ತಲೆ ತುಂಬ ಭಾರವಾಗಿರಬೇಕಲ್ಲ ?”  ಮಾಸ್ಟರ್ ನಗುತ್ತ ಉತ್ತರಿಸಿದ.

ಮುಂದಿನ ಹಾದಿಯನ್ನು ಇಬ್ಬರೂ ಮಾತಿಲ್ಲದೇ ಸಮಾಧಾನದಿಂದ ಕ್ರಮಿಸಿದರು.

Leave a Reply