ದೇವರ ಅವಶ್ಯಕತೆ ಗಾಳಿಯಷ್ಟೇ ಮುಖ್ಯವಾದಾಗ ಬಾ : ಝೆನ್ ಕಥೆ

ಬ್ಬ ಝೆನ್ ಮಾಸ್ಟರ್ ನದಿಯ ದಂಡೆಯ ಮೇಲೆ ಧ್ಯಾನ ಮಗ್ನನಾಗಿದ್ದಾಗ ಯುವಕನೊಬ್ಬ ಅವನ ಹತ್ತಿರ ಬಂದು ಕೇಳಿಕೊಂಡ.

ಯುವಕ : ಮಾಸ್ಟರ್, ನನ್ನನ್ನು ಶಿಷ್ಯನಾಗಿ ಸ್ವೀಕರಿಸಿ

ಮಾಸ್ಟರ್ : ಯಾಕೆ? ಏನು ವಿಷಯ?

ಯುವಕ : ನಾನು ದೇವರನ್ನು ಹುಡುಕಬೇಕು

ಈ ಮಾತನ್ನು ಕೇಳುತ್ತಿದ್ದಂತೆಯೇ, ಮಾಸ್ಟರ್ ತನ್ನ ಜಾಗದಿಂದ ಕೆಳಗೆ ಜಿಗಿದು, ಯುವಕನ ಅಂಗಿಯ ಕಾಲರ್ ಹಿಡಿದು, ಅವನನ್ನು ದರದರನೇ ಎಳೆದುಕೊಂಡು ನದಿಯ ಹತ್ತಿರ ಬಂದು, ಅವನ ತಲೆಯನ್ನು ನದಿಯಲ್ಲಿ ಮುಳುಗಿಸಿ ಹಾಗೇ ಹಿಡಿದುಕೊಂಡ.

ಕೆಲ ನಿಮಿಷಗಳಾಗುತ್ತಿದ್ದಂತೆಯೇ, ಯುವಕನಿಗೆ ಉಸಿರುಗಟ್ಟತೊಡಗಿತು, ಅವ ಒದ್ದಾಡತೊಡಗಿದ.
ಆಗ ಮಾಸ್ಟರ್, ಯುವಕನ ಮುಖವನ್ನು ನೀರಿನಿಂದ ಹೊರ ತೆಗೆದ. ಯುವಕ ಏದುಸಿರು ಬಿಡುತ್ತ ಜೋರು ಜೋರಾಗಿ ಕೆಮ್ಮತೊಡಗಿದ.

ಮಾಸ್ಟರ್ : ಈಗ ಹೇಳು, ನೀರಿನಲ್ಲಿ ನಿನ್ನ ಮುಖ ಮುಳುಗಿದ್ದಾಗ, ನಿನಗೇನು ಬೇಕೇ ಬೇಕು ಅನಿಸಿತ್ತು?

ಯುವಕ : ಗಾಳಿ, ಗಾಳಿ ಬೇಕನಿಸಿತ್ತು ಮಾಸ್ಟರ್.

ಮಾಸ್ಟರ್ : ಹಾಗಾದರೆ ಈಗ ವಾಪಸ್ ಹೋಗು, ಯಾವಾಗ ನಿನಗೆ ದೇವರ ಅವಶ್ಯಕತೆ ಗಾಳಿಯಷ್ಟೇ ಮುಖ್ಯ ಅನಿಸುತ್ತದೆಯೋ, ಆಗ ಬಾ. ದೇವರ ಬಗ್ಗೆ ಆಗ ಮಾತಾಡೋಣ.

(ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ)

Leave a Reply