“ನೀನು ಹೇಳೋದೂ ಸರಿನೇ….” : ಝೆನ್ ಸಂಭಾಷಣೆ

tao

ಬ್ಬರು ಝೆನ್ ಸನ್ಯಾಸಿಗಳು, ತಮ್ಮ ಮಾಸ್ಟರ್ ಹೇಳಿದ ಒಂದು ಮಾತಿನ ಬಗ್ಗೆ ವಾದ ಮಾಡುತ್ತಿದ್ದರು. ಒಬ್ಬ , ಮಾಸ್ಟರ್ ಮಾತು ಸರಿ ಎಂದೂ, ಇನ್ನೊಬ್ಬ ತಪ್ಪು ಎಂದು. ಒಮ್ಮತಕ್ಕೆ ಬರಲು ಸಾಧ್ಯವಾಗದ ಕಾರಣ, ಇಬ್ಬರೂ ಮಾಸ್ಟರ್ ಹತ್ತಿರ ಬಂದು ತಮ್ಮ ವಾದಗಳಿಗೆ ಸಮರ್ಥನೆ ಕೊಟ್ಟರು.

ಮೊದಲ ಸನ್ಯಾಸಿ, ಮಾಸ್ಟರ್ ಮಾತು ಯಾಕೆ ಸರಿ ಅಂತ ವಾದ ಮಂಡಿಸಿದ. ಸ್ವಲ್ಪ ಹೊತ್ತು ಯೋಚಿಸಿದ ಮಾಸ್ಟರ್ “ ನೀನು ಹೇಳಿದ್ದು ಸರಿ “ ಎಂದು ಗೋಣು ಹಾಕಿದ.

ಆಮೇಲೆ ಎರಡನೇ ಸನ್ಯಾಸಿ, ವಾದ ಮಾಡಿದ. ಮಾಸ್ಟರ್ ಮಾತು ಯಾಕೆ ತಪ್ಪು ಎಂಬುದನ್ನ ವಿವರವಾಗಿ ಚರ್ಚಿಸಿದ. ಮಾಸ್ಟರ್ ಮತ್ತೆ ಯೋಚನೆ ಮಾಡಿ ಹೇಳಿದ, “ ನೀನು ಹೇಳೋದೂ ಸರಿ”

ಈ ವಾದ ವಿವಾದವನ್ನು ನೋಡುತ್ತಿದ್ದ ಕಿರಿಯ ಸನ್ಯಾಸಿ ಕುತೂಹಲದಿಂದ ಕೇಳಿದ, “ ಇದು ಹೇಗೆ ಮಾಸ್ಟರ್, ಇಬ್ಬರಿಗೂ ನೀವು ಸರಿ ಎಂದು ಹೇಳಿದಿರಿ? ಯಾರೋ ಒಬ್ಬರದು ತಪ್ಪು ಇರಲೇಬೇಕಲ್ವಾ? “

ಮಾಸ್ಟರ್ ಮತ್ತೆ ಧ್ಯಾನ ಮಗ್ನನಾಗಿ ಯೋಚಿಸಿ ಕಿರಿಯ ಸನ್ಯಾಸಿಗೆ ಉತ್ತರಿಸಿದ.

“ ಹೌದು, ನೀನು ಹೇಳೋದೂ ಸರಿನೇ “

Leave a Reply