ಸುಝುಕಿ ರೋಶಿ ಮತ್ತು ಝೆನ್ ಮರೆತ ಶಿಷ್ಯರು

ಒಂದು ದಿನ ಸುಝುಕಿ ರೋಶಿ ತಮ್ಮ ಶಿಷ್ಯರನ್ನೆಲ್ಲ ಕರೆದುಕೊಂಡು ಮಾವಿನ ತೋಟಕ್ಕೆ ಹೋದರು.
ಅದು ಮಾವಿನ ಹಣ್ಣಿನ ಸೀಸನ್ ಆದ್ದರಿಂದ ಮಾವಿನ ಮರಗಳ ತುಂಬ ಭರ್ತಿ ಮಾವಿನ ಹಣ್ಣುಗಳು ತುಂಬಿದ್ದವು.

ಝೆನ್ ಕಲಿಯುತ್ತಿದ್ದ ಶಿಷ್ಯರೆಲ್ಲ ಅತ್ಯಂತ ಶಿಸ್ತಿನಿಂದ, ಗಂಭೀರವಾಗಿ ಮಾವಿನ ಹಣ್ಣುಗಳನ್ನ ಕಿತ್ತು ಬಾಕ್ಸ್ ಗೆ ತುಂಬಿ ಪ್ಯಾಕ್ ಮಾಡತೊಡಗಿದರು.

ಕೊನೆಗೆ ಮಾಸ್ಟರ್ ರೋಶಿ ಸ್ವತಃ ತಾವೇ ಮರ ಏರಿ, ಹಣ್ಣು ಕಿತ್ತು ಎಲ್ಲ ಶಿಷ್ಯರ ಮೇಲೆ ಎಸೆಯುತ್ತ ಜೋರಾಗಿ ಕೇಕೆ ಹಾಕಿ ಕೂಗಾಡಲು ಶುರು ಮಾಡುವ ತನಕ, ಶಿಷ್ಯರಿಗೆ, ತಾವು ಪೂರ್ತಿ ಝೆನ್ ಮರೆತದ್ದು ಮರೆತೇ ಹೋಗಿತ್ತು.

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ

Leave a Reply