ಊಟ ಮಾಡುವುದು ಮತ್ತು ಪತ್ರಿಕೆ ಓದುವುದು ~ ಝೆನ್ ಕಥೆ

ಮಾಸ್ಟರ್ ಸೆಯೂಂಗ್ ಸಾನ್ ತನ್ನ ಶಿಷ್ಯರಿಗೆ ಪಾಠ ಮಾಡುತ್ತಿದ್ದ; “ಊಟ ಮಾಡುವಾಗ ಬರೀ ಊಟ ಮಾಡಬೇಕು. ಪತ್ರಿಕೆ ಓದುವಾಗ ಬರೀ ಪತ್ರಿಕೆ ಓದಬೇಕು. ಮಾಡುತ್ತಿರುವ ಕೆಲಸವನ್ನು ಬಿಟ್ಟು ಬೇರೇನನ್ನೂ ಮಾಡಬಾರದು”.

ಒಂದು ದಿನ ಶಿಷ್ಯನೊಬ್ಬ, ಮಾಸ್ಟರ್ ಪತ್ರಿಕೆ ಓದುತ್ತಾ ಊಟ ಮಾಡುತ್ತಿರುವುದನ್ನು ನೋಡಿದ. “ಮಾಸ್ಟರ್, ನೀವು ಈಗ ಮಾಡುತ್ತಿರುವುದು, ನೀವು ಹೇಳಿಕೊಟ್ಟ ಪಾಠಕ್ಕೆ ವಿರುದ್ಧವಾಗಿದೆಯಲ್ಲವೆ?” ಆಶ್ಚರ್ಯಚಕಿತನಾಗಿ ಕೇಳಿದ.

ಸೆಯೂಂಗ್ ಸಾನ್ ಉತ್ತರಿಸಿದ, “ಪತ್ರಿಕೆ ಓದುತ್ತಾ ಊಟಮಾಡುವಾಗ, ಕೇವಲ ಪತ್ರಿಕೆ ಓದುತ್ತಾ ಊಟಮಾಡಬೇಕು”.

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

Leave a Reply