ಚಹಾ ಅಂಗಡಿಯವಳ ಝೆನ್ ಪರೀಕ್ಷೆ : ಝೆನ್ ಕಥೆ

ಝೆನ್ ಮಾಸ್ಟರ್ ಹೈಕುನ್, ತನ್ನ ಶಿಷ್ಯರಿಗೆ ಆಶ್ರಮದ ಎದುರು ಚಹಾ ಅಂಗಡಿ ಇಟ್ಟುಕೊಂಡಿದ್ದ ಹೆಂಗಸಿನ ಝೆನ್ ತಿಳುವಳಿಕೆಯ ಬಗ್ಗೆ ಮೇಲಿಂದ ಮೇಲೆ ವರ್ಣಿಸಿ ಹೇಳುತ್ತಿದ್ದ.
ಮಾಸ್ಟರ್ ಮಾತನ್ನು ಶಿಷ್ಯರು ನಂಬುತ್ತಿರಲಿಲ್ಲ, ತಾವೇ ಪರೀಕ್ಷೆ ಮಾಡಲು ಮುಂದಾಗುತ್ತಿದ್ದರು.

ತನ್ನ ಅಂಗಡಿಗೆ ಬಂದ ಸನ್ಯಾಸಿಗಳಿಗೆ, ಆ ಹೆಣ್ಣು ಮಗಳು ಪ್ರಶ್ನೆ ಮಾಡುತ್ತಿದ್ದಳು.
“ನೀವು ಇಲ್ಲಿ ಬಂದಿರುವುದು ಚಹಾ ಕುಡಿಯಲಿಕ್ಕೋ ಅಥವಾ ನನ್ನ ಝೇನ್ ಜ್ಞಾನ ಪರೀಕ್ಷೆ ಮಾಡಲಿಕ್ಕೋ ?”

ಚಹಾ ಕುಡಿಯಲಿಕ್ಕೆ ಎಂದವರಿಗೆ ರುಚಿಯಾದ ಚಹಾ ಮಾಡಿ ಕುಡಿಸುತ್ತಿದ್ದಳು.
ಝೆನ್ ಬಗ್ಗೆ ಚರ್ಚೆ ಮಾಡಬೇಕು ಎಂದವರನ್ನು ಪರದೆಯ ಹಿಂದೆ ಬರಲು ಕೇಳಿಕೊಳ್ಳುತ್ತಿದ್ದಳು. ಅವರು ಪರದೆಯ ಹಿಂದೆ ಬಂದೊಡನೆ ಪೊರಕೆ ತೆಗೆದುಕೊಂಡು ಸರಿಯಾಗಿ ಬಾರಿಸಲು ಶುರು ಮಾಡುತ್ತಿದ್ದಳು.

ಹತ್ತರಲ್ಲಿ ಒಂಭತ್ತು ಜನ ಅವಳ ಪೊರೆ ಏಟಿನ ರುಚಿ ಉಂಡಿದ್ದಾರೆ.

Leave a Reply