ನಿನ್ನ ಮೈ ಝೆನ್’ನಿಂದ ನಾರುತ್ತಿದೆ! ~ ಝೆನ್ ಕಥೆ

ಝೆನ್ ಮಾಸ್ಟರ್ ಸಾವಿನ ಹಾಸಿಗೆಯಲ್ಲಿದ್ದ.
ಅವನ ಪ್ರೀತಿ ಪಾತ್ರ ಮತ್ತು ಅವನ ವಾರಸುದಾರ ಶಿಷ್ಯ, ಪ್ರಶ್ನೆ ಮಾಡಿದ.
“ಮಾಸ್ಟರ್, ಇನ್ನೂ ಏನಾದರೂ ನಮಗೆ ಕಲಿಸುವುದು ಉಳಿದಿದೆಯೆ? ಹಾಗೇನಾದರೂ ಉಳಿದಿದ್ದರೆ ಸಾವಿಗೂ ಮುಂಚೆ ಆದಷ್ಟು ಬೇಗ ಹೇಳಿಕೊಡಿ.”
ಮಾಸ್ಟರ್, ಒಂದು ಕ್ಷಣ ಧ್ಯಾನ ಮಗ್ನನಾಗಿ ಚಿಂತಿಸಿ ಮಾತನಾಡಿದ.
“ನಿನ್ನ ಒಳನೋಟ ಅದ್ಭುತ, ನಿನ್ನ ಕಲಿಕೆ ಮತ್ತು ತರಬೇತಿ ಪರಿಪೂರ್ಣ, ಆದರೂ……..”.
“ಹೇಳಿ ಮಾಸ್ಟರ್, ಅದೇನಿದ್ದರೂ ನಾನು ಪರಿಹರಿಸಿಕೊಳ್ಳುವೆ…”
“ಏನಿಲ್ಲ, ನಿನ್ನ ಮೈ ಝೆನ್ ನಿಂದ ನಾರುತ್ತಿದೆ.”

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ

Leave a Reply