ಬದುಕಲು ಎರಡು ಸಿದ್ಧಾಂತಗಳು : ಝೆನ್ ಕಥೆ

ಬ್ಬ ಪ್ರಯಾಣಿಕ ಬೆಟ್ಟ ಗುಡ್ಡಗಳ ಮೂಲಕ ಹಾಯ್ದು ಹೋಗುವಾಗ, ವೃದ್ಧ ಸನ್ಯಾಸಿಯೊಬ್ಬ ಬಾದಾಮಿ ಗಿಡದ ಸಸಿ ನೆಡುತ್ತಿರುವುದನ್ನು ಗಮನಿಸಿದ. ಬಾದಾಮಿ ಸಸಿ ಬೆಳೆದು ಫಲ ನೀಡಲು ಸಾಕಷ್ಟು ವರ್ಷಗಳಾಗುತ್ತದೆ ಎನ್ನುವುದನ್ನು ಬಲ್ಲ ಪ್ರಯಾಣಿಕ, ವೃದ್ಧನನ್ನು ಪ್ರಶ್ನಿಸಿದ.

ಇಷ್ಟು ನಿಧಾನವಾಗಿ ಬೆಳೆಯುವ ಮರವನ್ನು ಯಾಕೆ ಬೆಳೆಸುತ್ತಿದ್ದೀಯಾ? ನಿನ್ನ ಆಯಸ್ಸು ಇನ್ನು ಎರಡು ಮೂರು ವರ್ಷವೂ ಇದ್ದ ಹಾಗಿಲ್ಲ…!

ವೃದ್ಧ ಸನ್ಯಾಸಿ ಉತ್ತರಿಸಿದ.
ಬದುಕಲು ನನಗೆ ಎರಡು ಸಿದ್ಧಾಂತಗಳಿವೆ.
ಒಂದು, ನನ್ನ ಬದುಕು ಶಾಶ್ವತ. ಮತ್ತು
ಎರಡನೇಯದು, ಇವತ್ತು ನನ್ನ ಬದುಕಿನ ಕೊನೆಯ ದಿನ.

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ

Leave a Reply