ಸಾಧನೆಯ ಹಾದಿಯಲ್ಲಿದ್ದ ಒಬ್ಬ ಝೆನ್ ಸನ್ಯಾಸಿ ಒಮ್ಮೆ ಮಾರ್ಕೇಟ್ ಮೂಲಕ ಹಾಯ್ದು ಹೋಗುವಾಗ ಮಾಂಸದ ಅಂಗಡಿಯೊಂದರಲ್ಲಿ ನಡೆಯುತ್ತಿದ್ದ ಸಂಭಾಷಣೆಯನ್ನು ಕಿವಿಗೊಟ್ಟು ಕೇಳಿದ.
ಗ್ರಾಹಕ : ನಿನ್ನ ಅಂಗಡಿಯಲ್ಲಿರುವ ಒಳ್ಳೆಯ ಮಾಂಸದ ತುಣುಕು ನನಗೆ ಬೇಕು
ಅಂಗಡಿಯವ: ನನ್ನ ಅಂಗಡಿಯಲ್ಲಿರೋದೆಲ್ಲ ಒಳ್ಳೆಯ ಮಾಂಸವೇ. ಇಲ್ಲಿಯ ಯಾವ ಮಾಂಸದ ತುಣುಕೂ ಕಳಪೆಯಲ್ಲ.
ಈ ಸಂಭಾಷಣೆಯನ್ನು ಕೇಳಿಸಿಕೊಳ್ಳುತ್ತಿದ್ದಂತಯೇ ಝೆನ್ ಸನ್ಯಾಸಿಗೆ ಜ್ಞಾನೋದಯವಾಯಿತು.
(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)