ನಭಗ ಮತ್ತು ನಾಭಾಗ ~ ಭಾಗವತದ ಒಂದು ಕಥೆ : ಪುರಾಣ ಕಥಾ ಸರಣಿ

ಭಾಗವತದ  9ನೇ ಸ್ಕಂಧ, 4ನೇ ಅಧ್ಯಾಯದಲ್ಲಿ  ನಭಗ ಮತ್ತು ನಾಭಾಗರ ಕಥೆ ಬರುತ್ತದೆ. 

ಸಂಗ್ರಹ ಮತ್ತು ನಿರೂಪಣೆ : ಗಾಯತ್ರಿ

ಹಾರಾಜ ನಭಗ, ನಾಭಾ ಹೆಸರಿನ ಮನುವಿನ ಪುತ್ರ. ಈ ನಭಗನ ಪುತ್ರರಲ್ಲೊಬ್ಬನಾದ ನಾಭಾಗ ದೀರ್ಘ ಕಾಲದವರೆಗೆ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈ ಕಾಲದಲ್ಲಿ ಅವನ ಹಿರಿಯ ಸಹೋದರರು ನಾಭಾಗನು ಇಷ್ಟು ವರ್ಷವಾದರೂ ಮರಳಿಬಾರದಿದ್ದುದರಿಂದ ಆತನೆಲ್ಲೋ ಸಂನ್ಯಾಸಿಯಾಗುವ ವ್ರತ ಕೈಗೊಂಡಿರಬೇಕೆಂದು ತಿಳಿದು, ರಾಜ್ಯದಲ್ಲಿ ಅವನಿಗೆ ಪಾಲು ಕೊಡಬೇಕೆನ್ನುವುದನ್ನು ಪರಿಗಣಿಸದೆ ತಮ್ಮ ತಮ್ಮಲ್ಲೆ ಹಂಚಿಕೊಂಡುಬಿಟ್ಟರು. ನಾಭಾಗ ಹಿಂದಿರುಗಿದಾಗ ತಮ್ಮ ತಂದೆಯನ್ನೇ ಅವನ ಪಾಲಿನ ಆಸ್ತಿ ಎಂದು ಅವನ ಜೊತೆಯಲ್ಲಿ ನಭಗನನ್ನು ಕಳುಹಿಸಿಕೊಟ್ಟರು.

ತನ್ನ ಕಣ್ಣೆದುರೇ ನಾಭಾಗನನ್ನು ವಂಚಿಸಿದ ತನ್ನ ಮಕ್ಕಳ ಬಗ್ಗೆ ನಭಾಗನಿಗೆ ಬೇಸರವಾಯಿತು. ಅವನ ಮೇಲಿನ ಕರುಣೆಯಿಂದ ಎರಡು ವಿಶೇಷ ಮಂತ್ರಗಳನ್ನು ಅವನಿಗೆ ನೀಡಿ, “ಅಂಗೀರನ ವಂಶಸ್ಥರು ಈಗೊಂದು ಮಹಾ ಯಜ್ಞವನ್ನು ಕೈಗೊಂಡಿರುವರು. ಅವರೆಷ್ಟೇ ಬುದ್ಧಿಶಾಲಿಗಳಾಗಿದ್ದರೂ ಯಾಗದ ಪ್ರತಿ ಆರನೇ ದಿನ ಭ್ರಾಂತರಾಗಿ ಮಂತ್ರವನ್ನು ತಪ್ಪು ತಪ್ಪಾಗಿ ಹೇಳುವರು. ಆ ಸಮಯದಲ್ಲಿ ನೀನು ಅಲ್ಲಿ ಉಪಸ್ಥಿತನಿದ್ದು ಅದನ್ನು ಸರಿಪಡಿಸು. ತುಷ್ಟರಾಗುವ ಅವರು ಯಜ್ಞದ ನಂತರ ಉಳೀಯುವ ಸಂಪತ್ತನ್ನು ನಿನಗೆ ನೀಡುವರು” ಎಂದು ಸೂಚಿಸಿದನು.

ಅದರಂತೆ ನಾಭಾಗನು ಯಜ್ಞ ಶಾಲೆಗೆ ಹೋಗಿ ವೈಶ್ವದೇವನನ್ನು ಕುರಿತ ಮಂತ್ರಗಳನ್ನು ಪಟಿಸಿದನು. ಅಂಗೀರ ವಂಶಸ್ಥರು ಅವನಿಗೆ ಉಳಿದ ಸಂಪತ್ತನ್ನು ನೀಡುತ್ತಿರುವಾಗ ಉತ್ತರ ದಿಕ್ಕಿನಿಂದ ಕಪ್ಪು ಬಣ್ಣದ ವ್ಯಕ್ತಿಯೊಬ್ಬ ಅಲ್ಲಿಗೆ ಬಂದು, “ ಈ ಯಜ್ಞ ಸ್ಥಳದ ಎಲ್ಲ ಸಂಪತ್ತೂ ನನಗೆ ಸೇರಬೇಕು” ಎಂದು ತಡೆದನು.

ಕೊನೆಗೆ ಅವರಿಬ್ಬರೂ ವ್ಯಾಜ್ಯ ಪರಿಹಾರಕ್ಕಾಗಿ ನಭಗನನ್ನು ಆಶ್ರಯಿಸಿದರು. ನಡೆದ ಎಲ್ಲವನ್ನೂ ಕೂಲಂಕಷವಾಗಿ ವಿಚಾರಿಸಿದ ಆತನು ಯಜ್ಞ ನಡೆಸುವಾಗ ಋಷಿಗಳು ಎಲ್ಲ ಸಂಪತ್ತನ್ನೂ ಅದಾಗಲೇ ಶಿವನಿಗೆ ಅರ್ಪಿಸಿದ್ದನ್ನು ಮನಗಂಡನು. ಅದರಂತೆ, ಆ ಎಲ್ಲವನ್ನು ಆತನಿಗೇ ಅರ್ಪಿಸುವಂತೆ ಮಗನಿಗೆ ಹೇಳಿದನು. ಆ ಕಪ್ಪು ಬಣ್ಣದ ವ್ಯಕ್ತಿಯು ಶಿವನೇ ಆಗಿರಲು, ಸಹರ್ಷದಿಂದ ನಾಭಾಗನು ಸಂಪತ್ತನ್ನು ಶಿವನಿಗೆ ಅರ್ಪಿಸಿ ಕರುಣೆಗಾಗಿ ಯಾಚಿಸಿದನು.

ನಾಭಾಗನ ಸದ್ವರ್ತನೆಯಿಂದ ಸಂತಸಗೊಂಡ ಪರಶಿವ ಆತನ ಮೇಲೆ ಕೃಪೆದೋರಿ ಅದನ್ನು ಆತನಿಗೇ ಮರಳಿಸಿ, ಜೊತೆಗೆ ದಿವ್ಯ ಜ್ಞಾನವನ್ನೂ ಕರುಣಿಸಿ ಅಂತರ್ಧಾನನಾದನು.

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s