ತನ್ನ ಶಿಷ್ಯರಿಗೆ ಮಾಸ್ಟರ್ ಪ್ರಶ್ನೆ ಮಾಡಿದ.
“ರಾತ್ರಿ ಮುಗಿಯುವ ಮತ್ತು , ಹಗಲು ಶುರುವಾಗುವ ಕ್ಷಣವನ್ನು ನಿಖರವಾಗಿ ಗುರುತಿಸುವುದು ಹೇಗೆ? “
ಒಬ್ಬ ಶಿಷ್ಯ : ದೂರದಿಂದ ನಾವು , ಯಾವುದು ನರಿ ಯಾವುದು ನಾಯಿ ಎಂದು ಸರಿಯಾಗಿ ಗುರುತಿಸುತ್ತೇವೋ ಆವಾಗ.
ಮಾಸ್ಟರ್ ಗೆ ಈ ಉತ್ತರ ಹಿಡಿಸಲಿಲ್ಲ.
ಇನ್ನೊಬ್ಬ ಶಿಷ್ಯ : ದೂರದಿಂದ ನಾವು , ಯಾವುದು ಆಲದ ಮರ, ಯಾವುದು ಅರಳಿ ಮರ ಎಂದು ಸರಿಯಾಗಿ ಗುರುತಿಸುತ್ತೇವೋ ಆವಾಗ.
ಮಾಸ್ಟರ್ ಗೆ ಈ ಉತ್ತರವೂ ಇಷ್ಟವಾಗಲಿಲ್ಲ.
ನೀವೇ ಹೇಳಿ ಮಾಸ್ಟರ್, ಶಿಷ್ಯರೆಲ್ಲ ಒತ್ತಾಯಿಸಿದರು.
ಮಾಸ್ಟರ್ : ಯಾವಾಗ ಅಪರಿಚಿತನೊಬ್ಬ ಎದುರಾದಾಗ, ನಮಗೆ ನಮ್ಮ ಮನೆಯವನ ಹಾಗೆ ಕಾಣುತ್ತಾನೋ ಆವಾಗ.
(ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ)