ಯಾರು ಅವರು
ನನ್ನ ಆಟ ಕೆಡಿಸುತ್ತಿರುವವರು?
ನಾನು ಬಲಕ್ಕೆ ಬಿಟ್ಟ ಬಾಣ
ಎಡಕ್ಕೆ ಹೇಗೆ ಬಂತು?
ಜಿಂಕೆಯ ಬೆನ್ನುಹತ್ತಿದವನ
ಹಂದಿ ಯಾಕೆ ಅಟ್ಟಿಸಿಕೊಂಡು ಬಂತು?
ಅಂಗಡಿಗೆ ಹೊರಟವನ ಕಾಲುಗಳನ್ನ
ಜೈಲಿನತ್ತ ಹೊರಳಿಸಿದವರು ಯಾರು?
ಕೆಡವಲಿಕ್ಕೆ ಎಂದು ತೆರೆದ ಗುಂಡಿಯಲ್ಲಿ
ನಾನೇ ಜಾರಿ ಬಿದ್ದದ್ದು ಹೇಗೆ?
ಯಾರಿಗೋ ನಮ್ಮ ಆಟ ಹಿಡಿಸುತ್ತಿಲ್ಲ.
ಅದಕ್ಕೇ, ನಮ್ಮ ಬೇಕುಗಳ ಬಗ್ಗೆ
ನಮಗೆ ಪುಟ್ಟ ಸಂಶಯ ಇರಲೇಬೇಕು.
ಮೂಲ : ಜಲಾಲುದ್ದಿನ್ ರೂಮಿ | ಕನ್ನಡಕ್ಕೆ : ಚಿದಂಬರ ನರೇಂದ್ರ