ಕತ್ತೆಯ ಮೇಲೆ ನಾನು ಕುಳಿತಿದ್ದರೆ! : ಒಂದು ನಸ್ರುದ್ದೀನ್ ಕಥೆ

Mullaಮುಲ್ಲಾ ನಸರುದ್ದೀನ್ ಮೇಲಿಂದ ಮೇಲೆ ತನ್ನ ಕತ್ತೆಯನ್ನ ಕಳೆದುಕೊಳ್ಳುತ್ತಿದ್ದ. ಒಮ್ಮೆ ಹೀಗೆ ತನ್ನಕಳೆದುಕೊಂಡ ಕತ್ತೆಯನ್ನ ಹುಡುಕುತ್ತ ಮುಲ್ಲಾ ಹಾಡುತ್ತ, ಕುಣಿಯುತ್ತ ಭಗವಂತನಿಗೆ ಧನ್ಯವಾದ ಹೇಳುತ್ತ ಒಂದು ಊರಿನ ರಸ್ತೆಯ ಮೂಲಕ ಹಾಯ್ದು ಹೋಗುತ್ತಿದ್ದ.

ಮುಲ್ಲಾ ಇಷ್ಟು ಖುಶಿಯಾಗಿದ್ದನ್ನ ಕಂಡ ಒಬ್ಬ ದಾರಿಹೋಕ ಪ್ರಶ್ನೆ ಮಾಡಿದ.

“ ಯಾಕೆ ನಸರುದ್ದೀನ ಇಷ್ಟು ಖುಶಿಯಾಗಿದ್ದೀಯ ? ಯಾರೋ ಹೇಳಿದರು ನಿನ್ನ ನೆಚ್ಚಿನ ಕತ್ತೆ ಕಾಣೆಯಾಗಿದೆಯೆಂದು, ಆದರೂ ನೀನು ಖುಶಿಯಾಗಿದ್ದೀಯಲ್ಲ, ಕತ್ತೆ ಸಿಕ್ತಾ?”

“ ಇನ್ನೂ ಸಿಕ್ಕಿಲ್ಲ ಗೆಳೆಯ ಆದರೆ ಖುಶಿಯ ವಿಷಯ ಏನು ಗೊತ್ತಾ, ಆ ಕತ್ತೆ ಕಳೆದು ಹೋದಾಗ ಅದೃಷ್ಟವಶಾತ್ ನಾನು ಆ ಕತ್ತೆಯ ಮೇಲೆ ಕೂತಿರಲಿಲ್ಲ, ಹಾಗೇನಾದರೂ ಕೂತಿದ್ದರೆ ನಾನೂ ಕಳೆದು ಹೋಗಿ ಬಿಡುತ್ತಿದ್ದೆ “
ಮುಲ್ಲಾ ತನ್ನ ಖುಶಿಯ ಕಾರಣ ವಿವರಿಸಿದ.

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

Leave a Reply