ಟಿಕೇಟ್ ಕಳೆದುಕೊಂಡ ಮುಲ್ಲಾ ನಸ್ರುದ್ದೀನ್! : Tea time story

Mullaಒಮ್ಮೆ ಮುಲ್ಲಾ ನಸ್ರುದ್ದೀನ, ರೈಲು ಪ್ರಯಾಣ ಮಾಡುತ್ತಿದ್ದ. ತನ್ನ ಕಂಪಾರ್ಟಮೆಂಟ್ ಗೆ ಟಿಕೇಟ್ ಕಲೆಕ್ಟರ್ ಬರುತ್ತಿರುವುದನ್ನ ದೂರದಿಂದ ಗಮನಿಸಿದ ಮುಲ್ಲಾ, ಸಹ ಪ್ರಯಾಣಿಕರ ಜೇಬುಗಳಲ್ಲಿ, ಚೀಲಗಳಲ್ಲಿ ತನ್ನ ಟಿಕೇಟ್ ಹುಡುಕತೊಡಗಿದ.

ಮುಲ್ಲಾನ ಈ ವರ್ತನೆಯನ್ನು ನೋಡಿ ಆಶ್ಚರ್ಯಚಕಿತನಾದ ಸಹ ಪ್ರಯಾಣಿಕನೊಬ್ಬ ಪ್ರಶ್ನೆ ಮಾಡಿದ.

“ ಹಿರಿಯರೆ ನಿಮ್ಮ ಟಿಕೇಟು ನಿಮ್ಮ ಜೇಬು ಅಥವಾ ನಿಮ್ಮ ಚೀಲದಲ್ಲಿರಬೇಕಲ್ಲವೆ? ನೀವು ಅಲ್ಲಿ ಬಿಟ್ಟು ಬೇರೆಲ್ಲ ಕಡೆ ಹುಡುಕುತ್ತಿದ್ದೀರಲ್ಲ?”

“ಹೌದು ನಾನು ಅಲ್ಲಿ ಹುಡುಕಬಹುದಿತ್ತು ಆದರೆ ಟಿಕೇಟು ಅಲ್ಲಿ ಸಿಗದಿದ್ದರೆ ನನ್ನ ಎಲ್ಲ ಭರವಸೆಯೂ ನಾಶವಾಗಿ ಬಿಡುತ್ತದಲ್ಲ “
ಮುಲ್ಲಾ ಉತ್ತರಿಸಿದ.

(ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ)

Leave a Reply