ಶಿಷ್ಯರು ತಂದ ಕೇಕ್ ಸವಿದು ಮಾಸ್ಟರ್ ತಾಜಿ ನುಡಿದ ಕೊನೆಯ ವಾಕ್ಯವೇನಾಗಿತ್ತು ಗೊತ್ತೆ? | ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ
ಝೆನ್ ಮಾಸ್ಟರ್ ತಾಜಿ ಸಾವಿನ ಹಾಸಿಗೆಯಲ್ಲಿದ್ದ. ಅವನ ಶಿಷ್ಯರಿಗೆ ಗೊತ್ತಿತ್ತು ಮಾಸ್ಟರ್ ತಾಜಿಗೆ ಟೋಕಿಯೋದ ಮಾರ್ಕೇಟ್ ನಲ್ಲಿ ಸಿಗುವ ಒಂದು ವಿಶೇಷ ಕೇಕ್ ಎಂದರೆ ತುಂಬಾ ಪ್ರೀತಿ ಎಂದು.
ಶಿಷ್ಯರು ಟೋಕಿಯೋದ ಅಂಗಡಿಗಳನ್ನೆಲ್ಲ ಹುಡುಕಾಡಿ ತಾಜಿ ಗಾಗಿ ಆ ವಿಶೇಷ ಕೊಂಡು ತಂದರು.
ಮಾಸ್ಟರ್ ತಾಜಿ ತುಂಬ ಖುಶಿಯಿಂದ ಶಿಷ್ಯರು ತಂದ ಕೇಕ್ ತಿಂದ. ಅವನು ಕೇಕ್ ತಿಂದಾದ ಮೇಲೆ ಮಾಸ್ಟರ್ ಗೆ , ಅವರಿಗಾಗಿ ಒಂದು ಕೊನೆಯ ವಾಕ್ಯ ಹೇಳುವಂತೆ ಶಿಷ್ಯರು ವಿನಂತಿ ಮಾಡಿದರು.
ಮಾಸ್ಟರ್ ತಾಜಿ, ತುಟಿಗೆ ಅಂಟಿಕೊಂಡಿದ್ದ ಕೇಕ್ ನ್ನು ನಾಲಿಗೆಯಿಂದ ನೆಕ್ಕುತ್ತಾ ಗಂಟಲು ಸರಿ ಮಾಡಿಕೊಂಡ “ ಬುದ್ಧನ ಪ್ರಕಾರ……. ಕ್ಷಮಿಸಿ ಕ್ಷಮಿಸಿ….ನೀವು ತಂದ ಕೇಕ್ ತುಂಬ ಚೆನ್ನಾಗಿತ್ತು”
ಮಾತು ಮುಗಿಸುತ್ತ ಮಾಸ್ಟರ್ ತಾಜಿ ನೆಲಕ್ಕೊರಗಿ ತೀರಿಕೊಂಡ.