ದಕ್ಕಬಹುದಾದದ್ದು, ದಕ್ಕಬೇಕಾದದ್ದು… : ಒಂದು ರೂಮಿ ಪದ್ಯ

ಮೂಲ : ಸೂಫಿ ಜಲಾಲುದ್ದಿನ್ ರೂಮಿ | ಕನ್ನಡಕ್ಕೆ : ಚಿದಂಬರ ನರೇಂದ್ರ

ಪ್ರಿಯಕರನ ಖಾಸಗೀತನ
ತನ್ನ ಸುತ್ತ ಚಾಚಿಕೊಂಡಿರುವುದು
ಗೊತ್ತಾಯಿತೆಂದರೆ
ಪ್ರೇಮಿಗೆ ನಿದ್ದೆ 
ಸಾಧ್ಯವಾಗುವುದೇ ಇಲ್ಲ.

ಕೊಂಚ ಬಾಯಾರಿದ ಪ್ರೇಮಿ
ಸ್ವಲ್ಪ ಹೊತ್ತು ಮಲಗಬಹುದೇನೋ,
ಆದರೆ ಅವರಿಗೆ ನಿದ್ದೆಯಲ್ಲೂ 
ನೀರಿನ ಕನಸು,
ತುಂಬಿ ಹರಿಯುವ ಹಳ್ಳದ ಪಕ್ಕ
ತಂಬಿಗೆ ತುಂಬ ನೀರು
ಅಥವಾ
ಆ ಇನ್ನೊಬ್ಬರ ಎದೆಯಿಂದ 
ಚಿಮ್ಮುತ್ತಿರುವ ಆರ್ದ್ರ ಅಂತಃಕರಣ.
ಇಡೀ ರಾತ್ರಿ
ಈ ಅಪರೂಪದ ಸಂಭಾಷಣೆಗೆ ಕಿವಿಯಾಗಿರಿ,
ಇದೊಂದೇ ಕ್ಷಣ 
ನಿಮಗೆ ದಕ್ಕಬಹುದಾದದ್ದು, ದಕ್ಕಬೇಕಾದದ್ದು.

Leave a Reply