ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #1

ಮೂಲ : ಶಮ್ಸ್ ತಬ್ರೀಝಿ | ಕನ್ನಡಕ್ಕೆ : ಚಿದಂಬರ ನರೇಂದ್ರ
ಬುದ್ಧಿ ಮತ್ತು ಪ್ರೇಮ ಸಂಯೋಜನೆಗೊಂಡಿರೋದೇ
ಬೇರೆ ಬೇರೆ ಧಾತುಗಳಿಂದ .
ಬುದ್ಧಿ  ಜನರ ನಡುವೆ ಗಂಟು ಹಾಕುತ್ತದೆ
ಆದರೆ  ಯಾವ ಅಪಾಯಕ್ಕೂ ತೆರೆದುಕೊಳ್ಳದಂತೆ.

ಆದರೆ ಪ್ರೇಮ ಹಾಗಲ್ಲ
ಅದು ಜನರ ನಡುವಿನ ಸಂಬಂಧಗಳಲ್ಲಿ ಉಂಟಾಗಿರುವ ಸಿಕ್ಕುಗಳನ್ನು ಬಿಚ್ಚುತ್ತದೆ
ಎಲ್ಲ ಅಪಾಯಗಳನ್ನೂ ಆಹ್ವಾನಿಸುತ್ತ.

ಬುದ್ದಿಯದು
ಯಾವಾಗಲೂ ಜಾಗರೂಕತೆಯ ಸ್ವಭಾವ
ಸಲಹೆ ನೀಡುವ ಹುಕಿ
ಉತ್ಕಟ ಆನಂದ ಬಗ್ಗೆ ಸದಾ ಹಿಂಜರಿಕೆ.

ಆದರೆ ಪ್ರೇಮಕ್ಕೆ ಅಪಾರ ಉತ್ಸಾಹ
ಅಪಾಯಗಳಿಗೆ ಎದೆಯೊಡ್ಡುವ ಹುರುಪು
ಬೆಂಕಿಯಲ್ಲಿ ಹಾರಿ ಬಂಗಾರವಾಗುವ ಉತ್ಕಟತೆ.

ಬುದ್ಧಿಯನ್ನು ಒಡೆಯುವುದು ಕಠಿಣ
ಆದರೆ ಪ್ರೇಮ ನಿರಾಯಾಸವಾಗಿ
ತನ್ನನ್ನು ತಾನು ಒಡೆದುಕೊಂಡು
ಅವಶೇಷವಾಗಬಲ್ಲದು.

ನಿಮಗೆ ಗೊತ್ತಿದೆ
ನಿಧಿ ಅಡಗಿರುವುದೆ ಅವಶೇಷಗಳಡಿಯಲ್ಲಿ
ಒಡೆದ ಹೃದಯ
ತನ್ನೊಳಗೆ ಬಚ್ಚಿಟ್ಟುಕೊಂಡಿದೆ.
ಅಪಾರ ಸಂಪತ್ತು

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

1 Response

Leave a Reply