ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ
ಒಂಟಿತನ ಮತ್ತು ಏಕಾಂತ
ಎರಡೂ ಬೇರೆ ಬೇರೆ.
ಒಂಟಿತನ ಕಾಡುತ್ತಿರುವಾಗ,
ಸರಿಯಾದ ದಾರಿಯಲ್ಲಿದ್ದೇವೆಂದು
ನಮ್ಮನ್ನು ನಾವು ಮೋಸಗೊಳಿಸಿಕೊಳ್ಳುವುದು
ಬಹಳ ಸುಲಭ.
ಏಕಾಂತ ಒಳ್ಳೆಯದು.
ಇಲ್ಲಿಯೂ ಇರುವುದು ಕೇವಲ ನಾವು ಮಾತ್ರ,
ಆದರೆ ಒಂಟಿತನದ ಜಿಗುಪ್ಸೆ ಇಲ್ಲಿಲ್ಲ.
ಕನ್ನಡಿಯಂಥ ಸಂಗಾತಿಯನ್ನ ಹುಡುಕಿ.
ಆ ಇನ್ನೊಬ್ಬರ ಹೃದಯದಲ್ಲಿ ಮಾತ್ರ
ನೀವು ನಿಮ್ಮ ನಿಜವನ್ನು ಕಾಣುವಿರಿ
ಮತ್ತು
ನಿಮ್ಮೊಳಗಿನ ಭಗವಂತನನ್ನು ಕೂಡ.
3ನೇ ನಿಯಮ ಇಲ್ಲಿ ನೋಡಿ : https://aralimara.com/2019/11/20/sufi-49/
2 Comments