ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #6

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ಬದುಕಿನಲ್ಲಿ ಏನೇ ಘಟಿಸಿದರೂ,
ಎಂಥ ಸಂಕಟದ ಸಮಯಗಳು ಎದುರಾದರೂ,
ದಯವಿಟ್ಟು
ಹತಾಶೆಯ ಮನೆ ಇರುವ ವಠಾರಕ್ಕೆ ಕಾಲಿಡಬೇಡ.

ಎಲ್ಲ ಬಾಗಿಲುಗಳು
ಸಂಪೂರ್ಣವಾಗಿ ಮುಚ್ಚಿದ್ದರೂ,
ಭಗವಂತ
ಕೇವಲ ನಿನಗಾಗಿ ಎಂದೇ
ಹೊಸ ದಾರಿಯೊಂದನ್ನು ಹುಟ್ಟು ಹಾಕುತ್ತಾನೆ.

ಅವನ ಅಪಾರ ಕರುಣೆಯನ್ನು ಸ್ಮರಿಸು !

ಎಲ್ಲ ಮನಸ್ಸಿನಂತೆ ನಡೆಯುತ್ತಿರುವಾಗ
ಕೃತಜ್ಞತೆಗಳನ್ನು ಒಪ್ಪಿಸುವುದು ಸುಲಭ ಸಾಧ್ಯ.

ಆದರೆ ತನಗೆ
ಕೊಡಮಾಡಿರುವುದರ ಬಗ್ಗೆ ಮಾತ್ರ ಅಲ್ಲ
ನಿರಾಕರಿಸಿದ್ದರ ಬಗ್ಗೆ ಕೂಡ
ಸೂಫೀ ಕೃತಜ್ಞ.

5ನೇ ನಿಯಮ ಇಲ್ಲಿ ನೋಡಿ : https://aralimara.com/2019/11/26/sufi-52/

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

1 Response

Leave a Reply