ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #11

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ದಾರಿ ಎಲ್ಲಿಗೆ ಕರೆದೊಯ್ಯಬಹುದು
ಎನ್ನುವ ಆತಂಕದಿಂದ ದೂರವಿರಿ.
ಬದಲಾಗಿ ನೀವು ಇಡಲು ಮುಂದಾಗುತ್ತಿರುವ
ಮೊದಲ ಹೆಜ್ಜೆಯ ಮೇಲೆ ಮಾತ್ರ
ಧ್ಯಾನವನ್ನು ಕೇಂದ್ರೀಕರಿಸಿ.

ಬದುಕಿನ ಪ್ರಯಾಣದಲ್ಲಿ
ಮೊದಲ ಹೆಜ್ಜೆ ಮಾತ್ರ ಅತ್ಯಂತ ಕಠಿಣ ಭಾಗ;
ಅದನ್ನು ಸರಿಯಾಗಿ ನಿಭಾಯಿಸುವುದೊಂದೆ
ನಿಮ್ಮ ಮುಂದಿರುವ ಜವಾಬ್ದಾರಿ.

ಈ ಹೆಜ್ಜೆ ಇಟ್ಟಾದ ಮೇಲೆ
ಎಲ್ಲವನ್ನೂ
ಪ್ರಯಾಣದ ಸಹಜತೆಗೆ ಬಿಟ್ಟು ಬಿಡಿ
ಬಾಕಿ ಎಲ್ಲ ನಿಮ್ಮನ್ನು ಹಿಂಬಾಲಿಸುತ್ತದೆ.

ಹರಿವಿನ ಜೊತೆ ಹರಿಯಬೇಡಿ,
ನೀವೇ ಹರಿವಾಗಿ.

10ನೇ ನಿಯಮ ಇಲ್ಲಿ ನೋಡಿ :  https://aralimara.com/2019/12/07/sufi-58/

1 Comment

Leave a Reply