ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #17

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ವರಿಸಿಕೊಳ್ಳುತ್ತಿರುವ
ಬದಲಾವಣೆಯ ಹೊಸ ಗಾಳಿಯನ್ನು
ತಡೆದು ನಿಲ್ಲಿಸಬಯಸುವ
ನಿಮ್ಮ ಉತ್ಸಾಹವನ್ನ
ಸ್ವಲ್ಪ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ.

ಬದಲಾಗಿ ಬದುಕಿಗೆ,
ನಿಮ್ಮ ಮೂಲಕ
ಬಾಳುವ ಅವಕಾಶ ಮಾಡಿಕೊಡಿ.

ಬದಲಾವಣೆ ಎಂದರೆ
ಚಿಮ್ಮಲಾಗಿರುವ ಬದುಕಿನ ನಾಣ್ಯ.

ನಿಮ್ಮ ಬದುಕು
ತಲೆಕೆಳಗಾಗಿ ಬಿಡಬಹುದೆಂದು ಗಾಬರಿಯಾಗಬೇಡಿ.

ಯಾರಿಗೆ ಗೊತ್ತು,
ಈಗ ನಿಮ್ಮೆಡೆ ಮುಖ ಮಾಡಿರುವ
ಬದುಕಿನ ಭಾಗ
ನೀವು ಬದುಕುತ್ತಿರುವ ಬದುಕಿನ ಭಾಗಕ್ಕಿಂತ ಅದ್ಭುತವಾಗಿರಬಹುದು.

16ನೇ ನಿಯಮ ಇಲ್ಲಿ ನೋಡಿ: https://aralimara.com/2020/01/03/sufi-67/

1 Comment

Leave a Reply