ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ
ಭೂತ ಕಾಲದ ವಿಷಯ
ವ್ಯಾಖ್ಯಾನಕ್ಕೆ ಮಾತ್ರ ಯೋಗ್ಯ ,
ಭವಿಷ್ಯದ ನಿರೀಕ್ಷೆಗಳು
ಭ್ರಮೆಯ ಭಾಗ.
ಭೂತದಿಂದ ಭವಿಷ್ಯಕ್ಕೆ
ಕಾಲದ ಮೂಲಕ ಸಾಗುವ
ಜಗತ್ತಿನ ಪಯಣ
ಸರಳ ರೇಖೆಯಲ್ಲಲ್ಲ
ಬದಲಾಗಿ
ಕಾಲದ ಚಲನೆ
ನಮ್ಮ ಮೂಲಕ, ನಮ್ಮೊಳಗೆ
ಕೊನೆಯಿಲ್ಲದ ಸುರುಳಿಯಾಕಾರದ
ದಿವ್ಯ ಪಥದಲ್ಲಿ.
ಶಾಶ್ವತ ಎಂದರೆ ಅನಂತ ಕಾಲವಲ್ಲ,
ಬದಲಾಗಿ ಶಾಶ್ವತ
ಕಾಲದ ಪರಿವೆಯೇ ಇಲ್ಲದ್ದು.
ಭೂತ, ಭವಿಷ್ಯಗಳನ್ನು
ಬುದ್ಧಿಯ ಪರೀಧಿಯಿಂದ ಹೊರಗಿಟ್ಟು
ವರ್ತಮಾನದ ಕ್ಷಣಗಳಲ್ಲಿ
ಬದುಕು ಸಾಧ್ಯವಾದಾಗ
ಶಾಶ್ವತದ ಬೆಳಕು
ಒಳಗೆ ಇಳಿಯುವುದು
18ನೇ ನಿಯಮ ಇಲ್ಲಿ ನೋಡಿ: https://aralimara.com/2020/01/08/sufi-69/
[…] 18ನೇ ನಿಯಮ ಇಲ್ಲಿ ನೋಡಿ: https://aralimara.com/2020/01/11/sufi-70/ […]