ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #20

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ಈ ಜಗತ್ತಿನಲ್ಲಿ
ನಮ್ಮ ವಿಕಾಸಕ್ಕೆ ಕಾರಣವಾಗಿರುವುದು
ನಮ್ಮ ನಡುವೆ ಇರುವ ಸಮಾನತೆಗಳಲ್ಲ,
ಸಮಾನ ಹೋಲಿಕೆಗಳಲ್ಲ,
ಬದಲಾಗಿ
ನಮ್ಮನ್ನು ಕೈ ಹಿಡಿದು ಮುನ್ನಡೆಸುತ್ತಿರುವುದು
ನಮ್ಮ ನಡುವಿನ ವೈರುಧ್ಯಗಳು.

ಬ್ರಹ್ಮಾಂಡದ ಎಲ್ಲ ವೈರುಧ್ಯಗಳು
ಪ್ರತಿಯೊಬ್ಬರಲ್ಲೂ ಜಾಗ ಮಾಡಿಕೊಂಡಿವೆ.
ಪ್ರತೀ ಆಸ್ತಿಕನೂ ತನ್ನೊಳಗಿರುವ
ನಾಸ್ತಿಕನನ್ನು ಭೇಟಿ ಮಾಡಬೇಕು
ಮತ್ತು, ಪ್ರತೀ ನಾಸ್ತಿಕನೂ
ತನ್ನೂಳಗಿನ ಮೂಕ ಆಸ್ತಿಕನನ್ನು ಮುಟ್ಟಿ ಮಾತನಾಡಿಸಬೇಕು.

ಮನುಷ್ಯ
ತನ್ನ ಪರಿಪೂರ್ಣ ಸ್ಥಿತಿ ಮುಟ್ಟುವ ತನಕ
ನಂಬಿಕೆ ಕೇವಲ
ತನ್ನ ಬದ್ಧವೈರಿಯಂತೆ ಕಾಣಿಸುವ ಅಪನಂಬಿಕೆಯನ್ನು
ಉದ್ದೀಪಿಸುವ ನಿಧಾನ ಪ್ರಕ್ರಿಯೆ ಮಾತ್ರ.

18ನೇ ನಿಯಮ ಇಲ್ಲಿ ನೋಡಿ: https://aralimara.com/2020/01/11/sufi-70/

1 Comment

Leave a Reply