ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #21

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

20ನೇ ನಿಯಮ ಇಲ್ಲಿ ನೋಡಿ: https://aralimara.com/2020/01/13/sufi-71/

1 Comment

Leave a Reply