ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #34

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ಭಗವಂತ
ಸದಾ ನಮ್ಮ ಕೆಲಸದಲ್ಲಿಯೇ ಮಗ್ನ.

ಮನುಷ್ಯನ ವಿಕಾಸ ಯಾವತ್ತಿದ್ದರೂ
ಪ್ರಗತಿಯಲ್ಲಿರುವ ಪ್ರಕ್ರಿಯೆ.
ಕೆಲಸ ನಿಧಾನವಾಗಿರಬಹುದು
ಆದರೆ ನಿರಂತರವಾಗಿ ಮುಂದುವರೆಯುತ್ತಿದೆ.

ಪ್ರತಿಯೊಬ್ಬ ಮನುಷ್ಯನೂ
ಪೂರ್ಣವಾಗಲು
ಕಾಯುತ್ತಿರುವ, ತಹತಹಿಸುತ್ತಿರುವ
ಅಪೂರ್ಣ ಕಲಾಕೃತಿಗಳು.

ಭಗವಂತ
ಪ್ರತೀ ಮನುಷ್ಯನನ್ನು
ಪ್ರತ್ಯೇಕ ಕಲಾಕೃತಿಯಂತೆ
ಅನನ್ಯವಾಗಿ ಚಿತ್ರಿಸುತ್ತಾನೆ.

ಮನುಷ್ಯತ್ವ
ಒಂದು ಸೂಕ್ಷ್ಮ ಕಲಾಪ್ರಕಾರ,
ಪ್ರತೀ ಚುಕ್ಕೆಯೂ
ಪೂರ್ಣ ಚಿತ್ರದ ಅತ್ಯಂತ ಮುಖ್ಯ ಭಾಗ.

33ನೇ ನಿಯಮ ಇಲ್ಲಿ ನೋಡಿ : https://aralimara.com/2020/02/18/sufi-87/

One thought on “ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #34

Leave a Reply