ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #35

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ
ಯಾವ ದಿಕ್ಕಾದರೂ ಸರಿ
ಅಂಥ ವ್ಯತ್ಯಾಸವೆನೂ ಆಗದು.

ನಿಮ್ಮ ಗುರಿ ಏನಾದರೂ ಇರಲಿ,
ಆದರೆ ಪ್ರತೀ ಪ್ರಯಾಣ
ನಿಮ್ಮ ಆಂತರ್ಯದ ಪ್ರಯಾಣವಾಗುವುದನ್ನ
ದಯಮಾಡಿ ಖಚಿತಪಡಿಸಿಕೊಳ್ಳಿ .

ನೀವು ನಿಮ್ಮ ಅಂತರಂಗವನ್ನು ಪ್ರವೇಶಿಸಿದಾಗ
ಇಡೀ ಜಗತ್ತನ್ನೇ ಎದುರುಗೊಳ್ಳುತ್ತೀರಿ
ಮತ್ತು ಜಗತ್ತಿನಾಚೆಗೂ ಹೆಜ್ಜೆ ಹಾಕುತ್ತೀರಿ.

34ನೇ ನಿಯಮ ಇಲ್ಲಿ ನೋಡಿ : https://aralimara.com/2020/02/20/sufi-88/

1 Comment

Leave a Reply