ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ
ಮಾಸ್ಟರ್ ಜೋಶು ಝೆನ್ ಕಲಿಯಲು ಶುರು ಮಾಡಿದ್ದು ಅರವತ್ತನೇ ವಯಸ್ಸಿನಲ್ಲಿ. ಜ್ಞಾನೋದಯವಾದಾಗ ಅವನಿಗೆ ಬರೊಬ್ಬರಿ ಎಂಭತ್ತು ವರ್ಷ ವಯಸ್ಸು. ತನ್ನ ನೂರಾ ಇಪ್ಪತ್ತನೇ ವಯಸ್ಸಿನವರೆಗೆ ಆತ ಝೆನ್ ಪಾಠ ಮಾಡಿದ.
ಒಮ್ಮೆ ಒಬ್ಬ ಶಿಷ್ಯ, ಜೋಶುನಿಗೆ ಪ್ರಶ್ನೆ ಮಾಡಿದ.
“ ನನ್ನ ಮನಸ್ಸು ಖಾಲಿಯಾಗಿದೆಯಲ್ಲ, ನಾನು ಏನು ತಾನೇ ಮಾಡಲಿ ಇನ್ನು? “
“ಮನಸ್ಸಲ್ಲಿರೋದನ್ನ ಹೊರ ಹಾಕು” ಜೋಶು ಉತ್ತರಿಸಿದ.
“ ಆದರೆ ನನ್ನ ಮನಸ್ಸು ಖಾಲಿ, ಏನನ್ನ ಹೊರ ಹಾಕಲಿ?” ಶಿಷ್ಯ ಮತ್ತೆ ಪ್ರಶ್ನೆ ಮಾಡಿದ.
“ ಹೌದಾ, ಹಾಗಾದರೆ ಅದನ್ನೇ ಹೊತ್ತು ನಡೆ” ಜೋಶು ಕಣ್ಣು ಮಿಟುಕಿಸಿದ.