ಅಂಬಿಗರ ಚೌಡಯ್ಯನ ವಚನಗಳು : ಅರಳಿಮರ Posters

ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದ ಶಿವಶರಣರ ಮಧ್ಯದಲ್ಲಿ ಪ್ರಜ್ವಲವಾಗಿ ಬೆಳಗಿದ ಶರಣನೆಂದರೆ ಅಂಬಿಗರ ಚೌಡಯ್ಯ. ಮಾತು ಕಟುವಾದರೂ ದಿಟವನ್ನೆ ನುಡಿದ ದಿಟ್ಟನೀತ, ನುಡಿದಂತೆ ನಡೆದವನು, ನಡೆದಂತೆ ನುಡಿದವನು ಅಂಬಿಗರ ಚೌಡಯ್ಯ. ನಿಜಾರ್ಥದಲ್ಲಿ ಒಬ್ಬ ಬಂಡುಕೋರ, ಕ್ರಾಂತಿಕಾರಿ ಶರಣ, ನಿಷ್ಟೂರ ಮನುಷ್ಯ. ಎಲ್ಲಾ ಶರಣರಂತೆ ಈತ ಕಾಯಕಯೋಗಿ ದೋಣಿ ನಡೆಸುವುದು ಅವನ ಕಾಯಕವಾಗಿತ್ತು. ..

ಅಂಬಿಗರ ಚೌಡಯ್ಯ ೧೨ನೇ ಶತಮಾನದ ಬಸವಣ್ಣನವರ ಅನುಯಾಯಿ ಶರಣ. ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಗುರು ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರ ವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದರು. ಧರ್ಮ-ದೇವರು ಕೇವಲ ಶ್ರೀಮಂತರ ಸೊತ್ತಾಗಿದ್ದ ಅಂದಿನ ಸಂದರ್ಭದಲ್ಲಿ ಪೂಜೆ-ಮೋಕ್ಷ ಕೇವಲ ನೇಮವಂತರ, ಬ್ರಾಹ್ಮಣರ ಗುತ್ತಿಗೆಯಾಗಿದ್ದ ಸಮಯದಲ್ಲಿ ಭಾಷ್ಯಕಾರರು ಹೇಳಿದ್ದೇ ಸರಿಯೆನ್ನುವ ವ್ಯವಸ್ಥೆಯಲ್ಲಿ ಚೌಡಯ್ಯ ಈ ಮೂವರನ್ನು ಕ್ರೂರ ಕರ್ಮಿಗಳೆಂದು, ಸಂದೇಹಿಗಳೆಂದು ಕಟುವಾಗಿ ಟೀಕಿಸುವುದರ ಮೂಲಕ ಇವರು ಹೋದ ದಾರಿಯಲ್ಲಿ ಯಾರೂ ಹೋಗ ಬಾರದೆಂದು ಸ್ಪಷ್ಟಪಡಿಸುತ್ತಾನೆ. ಇವರ ವಚನಗಳು ತುಂಬಾ ಖಾರವಾಗಿರುವುದು ಅವರ ಆತ್ಮ ಬಲವನ್ನು ಹಾಗೂ ಸತ್ಯವನ್ನು ಪ್ರತಿಪಾದಿಸುವಲ್ಲಿ ಹೊಂದಿದ್ದ ಧೈರ್ಯವನ್ನು ತೋರಿಸುತ್ತವೆ.

ಈತ ಒಳ್ಳೆಯ ವಚನಕಾರ, ಸುಮಾರು ಈತನ ೨೭೮ ವಚನಗಳು ದೊರಕಿವೆ. ವಚನಾಂಕಿತವನ್ನು ತನ್ನ ಹೆಸರಿನಲ್ಲೆ ಬಳಸಿದ್ದಾನೆ. ಅಂಬಿಗರ ಚೌಡಯ್ಯ ಪರಿಣಾಮ ಬೀರುವಂತೆ ರಚಿಸಿರುವ ಅವನ ವಚನಗಳಲ್ಲಿ ಆಳವಾದ ಅನುಭವ, ಸಾಮಾಜಿಕ ಪ್ರಜ್ಞೆ ಎದ್ದು ಕಾಣುತ್ತದೆ. ಈತನ ಜನ್ಮಸ್ಥಳ ಗುಲ್ಬರ್ಗ ಜಿಲ್ಲೆಯ ಅಫಜಲ್ ಪುರ ತಾಲ್ಲೋಕಿನ ಚೌಡದಾನಪುರವೆಂದು ಸಂಶೋಧಕರು ಹೇಳಿದ್ದಾರೆ.

ಅಂಬಿಗರ ಚೌಡಯ್ಯ ವಿಚಾರವಂತ, ಹಿರಿಯರು ಹೇಳಿದ್ದಾರೆಂದು ಯಾವುದೇ ತತ್ವವನ್ನು ಕುರುಡಾಗಿ ಅನುಸರಿಸುತ್ತಿರಲಿಲ್ಲ, ದಾಕ್ಷಿಣ್ಯ ವಿಲ್ಲದೆ ಚರ್ಚೆ ಮಾಡಿ ಮನಸ್ಸು ಒಪ್ಪಿದರೆ ಮಾತ್ರ ಅಂಗೀಕರಿಸುತ್ತಿದ್ದನು. ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಅಂಬಿಗರ ಚೌಡಯ್ಯ ನಿಜ ಶರಣನು. ಸಮಾಜದ ಅನಾಚಾರ, ಅತ್ಯಾಚಾರ, ಢಂಬಾಚಾರಗಳನ್ನೂ ನಿರ್ಭಿತಿಯಿಂದ ಕಟುವಾಗಿ ಟೀಕಿಸಿದವನು. ತನ್ನ ವಚನಗಳನ್ನು ವೈಚಾರಿಕ ವಾಗಿ ನಿರೂಪಿಸಿ ಮಹಾಮಾನವತಾವಾದಿಯಾಗಿದ್ದಾನೆ. (ಮಾಹಿತಿ ಕೃಪೆ: https://lingayatreligion.com )

ಅಂಬಿಗರ ಚೌಡಯ್ಯನವರ 6 ವಚನ ಚಿತ್ರಿಕೆಗಳು ಇಲ್ಲಿವೆ…

1

2

3

4

5

6

1 Comment

Leave a Reply