ಚಂದ್ರಘಂಟಾ ದೇವಿ : ನವರಾತ್ರಿಯ ಮೂರನೇ ದಿನ

ನವರಾತ್ರಿಯ ಮೂರನೆ ದಿನ ಚಂದ್ರಘಂಟ ದೇವಿಯ ಪೂಜೆ ನಡೆಯುತ್ತದೆ.

ಚಂದ್ರಘಂಟ ಅಂದರೆ ಘಂಟೆಯಾಕಾರದ ಚಂದ್ರನನ್ನು ಮಸ್ತಕದಲ್ಲಿ ಧರಿಸಿದವಳು ಹಾಗೂ ಚಂದ್ರಘಂಟಾಳ ಮೂರನೇ ಕಣ್ಣು ತೆರೆದೇ ಇದ್ದು ಯಾವ ಸಮಯದಲ್ಲಿ ಆದರೂ ದುಷ್ಟ ಶಕ್ತಿಗಳ ನಿಗ್ರಹಕ್ಕೆ ಸಿದ್ಧಳಾಗಿರುವಂತೆ ಕಾಣುತ್ತಾಳೆ. ಚಂದ್ರಘಂಟಾಳನ್ನು ಚಂದ್ರಿಕಾ, ರಣಚಂಡಿ ಎಂದೂ ಕರೆಯುತ್ತಾರೆ. ಇವಳಿಗೆ ಹತ್ತು ಕೈಗಳಿದ್ದು, ಹತ್ತೂ ಕೈಗಳಲ್ಲಿ ಶಸ್ತ್ರಾಸ್ತ್ರವನ್ನು ಹಿಡಿದುಕೊಂಡು ಸಿಂಹವಾಹಿನಿಯಾಗಿ ರಾರಾಜಿಸುತ್ತಾಳೆ

ಹಿನ್ನೆಲೆ

ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟ ರೂಪದಲ್ಲಿ ತೋರಿಸಿದ್ದಾರೆ. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುವಲ್ಲಿ ಸಫಲರಾಗುತ್ತಾರೆ. ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ.

ಅತಿ ಭಯಂಕರನಾಗಿ ಕಾಣುತ್ತಿದ್ದ ಶಿವನನ್ನು ನೋಡಿ ಪಾರ್ವತಿ ದೇವಿಯ ತಾಯಿ ಮೂರ್ಛೆಹೋಗುತ್ತಾಳೆ. ಆಗ ಪಾರ್ವತಿಯು ಚಂದ್ರಘಂಟ ರೂಪದಲ್ಲಿ ಶಿವನ ಮುಂದೆ ಪ್ರತ್ಯಕ್ಷಳಾಗಿ ಶಿವನು ರಾಜಕುಮಾರನ ರೂಪವನ್ನು ತಾಳಬೇಕಾಗಿ ವಿನಂತಿಸಿಕೊಳ್ಳುತ್ತಾಳೆ. ಹೀಗೆ ಶಿವನು ಸುಂದರ ವರನ ರೂಪವನ್ನು ತಾಳಿದ ನಂತರ ಶಿವ ಪಾರ್ವತಿಯ ಮದುವೆ ನೆರವೇರುತ್ತದೆ.

Leave a Reply