ಚೇತನಾ

ಕುರುಡ ಹಿಡಿದ ಕಂದೀಲು : ಒಂದು ಝೆನ್ ಕಥೆ ~ Tea time story

ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ

ಕುರುಡನ ಕಂದೀಲು ~ ಒಂದು ಝೆನ್ ಕಥೆ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ ಹಳೆಯ ಜಪಾನಿನಲ್ಲಿ, ಬಿದಿರು ಮತ್ತು ಕಾಗದಗಳಿಂದ ಕಂದೀಲುಗಳನ್ನು ತಯಾರಿಸಿ, ಅದರಲ್ಲಿ ಮೇಣದ ಬತ್ತಿ ಇಟ್ಟು ಉಪಯೋಗಿಸುತ್ತಿದ್ದರು. ಕುರುಡನೊಬ್ಬ ತನ್ನ ಗೆಳೆಯನ ಮನೆಗೆ ಬಂದಿದ್ದ. ರಾತ್ರಿ ಅವ ವಾಪಸ್ ಹೋಗುವಾಗ, ಗೆಳೆಯ ಅವನಿಗೆ ದಾರಿಯಲ್ಲಿ ಬಳಸಲು ಒಂದು ಕಂದೀಲು ಕೊಟ್ಟ. ಕುರುಡ : ನನಗೇಕೆ ಕಂದೀಲು? ಮೊದಲೇ ನನಗೆ ಕಣ್ಣು ಕಾಣಿಸುವುದಿಲ್ಲ. ಕತ್ತಲು, ಬೆಳಕು ಎಲ್ಲ ಒಂದೇ ನನಗೆ. ಗೆಳೆಯ : ಗೊತ್ತು ನನಗೆ, ದಾರಿ ತೋರಿಸಲು ನಿನಗೆ ಕಂದೀಲು ಬೇಕಿಲ್ಲ. […]