ಈ ವಚನದ ಮೂಲಕ ಶರಣೆ ಕದಿರ ರೆಮ್ಮವ್ವೆ, ರಾಟೆಯಿಂದ ನೂಲು ತೆಗೆಯುವ ಪ್ರಕ್ರಿಯೆಯಲ್ಲಿ ಸಮಸ್ತೆ ಸೃಷ್ಟಿಯ ದರ್ಶನವನ್ನೇ ಮಾಡಿಸುತ್ತಾಳೆ. ನಾ ತಿರುಹುವ ರಾಟೆಯ ಕುಲಜಾತಿಯ ಕೇಳಿರಣ್ಣಾ; ಅಡಿಯ ಹಲಗೆ ಬ್ರಹ್ಮ , ತೋರಣ ವಿಷ್ಣು, ನಿಂದ ಬೊಂಬೆ ಮಹಾರುದ್ರ; ರುದ್ರನ ಬೆಂಬಳಿಯವೆರಡು ಸೂತ್ರ ಕರ್ಣ . ಅರಿವೆಂಬ ಕದಿರು, ಭಕ್ತಿಯೆಂಬ ಕೈಯಲ್ಲಿ ತಿರುಹಲಾಗಿ, ಸುತ್ತಿತ್ತು ನೂಲು ಕದಿರು ತುಂಬಿತ್ತು. ರಾಟೆಯ ತಿರುಹಲಾರೆ –ಎನ್ನ ಗಂಡ ಕುಟ್ಟಿಹ ಇನ್ನೇವೆ ಕದಿರ ರೆಮ್ಮಿಯೊಡೆಯ ಗುಮ್ಮೇಶ್ವರಾ? ತನ್ನ ಕಾಯಕದಲ್ಲೇ ಕೈಲಾಸ ಕಂಡು […]