ವೃದ್ಧ ಸನ್ಯಾಸಿಯ ಪ್ರತಿಕ್ರಿಯೆ

ಒಂದು ಝೆನ್ ಆಶ್ರಮದಲ್ಲಿ, ಶಿಷ್ಯರಿಗೆಲ್ಲ ಅಲ್ಲಿದ್ದ ಒಬ್ಬ ವೃದ್ಧ ಸನ್ಯಾಸಿಯ ಬಗ್ಗೆ ಅಪಾರ ಕುತೂಹಲ. ಆ ವೃದ್ಧ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿರಲಿಲ್ಲ, ಯಾವುದರ ಬಗ್ಗೆಯೂ ಚಿಂತೆ ಮಾಡುತ್ತಿರಲಿಲ್ಲ. ಶಿಷ್ಯರಿಗೆ ಸನ್ಯಾಸಿಯ ಈ ವರ್ತನೆ, ಅಸಹಜ ಅನಿಸಿತ್ತು, ಅವನನ್ನು ಕಂಡು ಅವರಿಗೆ ಒಮ್ಮೊಮ್ಮೆ ಹೆದರಿಕೆಯಾಗುತ್ತಿತ್ತು. ಒಂದು ದಿನ ಎಲ್ಲ ಶಿಷ್ಯರು ಸೇರಿ ಆ ಸನ್ಯಾಸಿಯನ್ನು ಪರೀಕ್ಷೆ ಮಾಡಬೇಕೆಂದು ನಿರ್ಧರಿಸಿದರು. ಒಂದು ಕತ್ತಲ ದಾರಿಯ ತಿರುವಿನಲ್ಲಿ ಅಡಗಿಕೊಂಡು ಆ ಸನ್ಯಾಸಿ ಬರುವುದನ್ನೇ ಕಾಯತೊಡಗಿದರು. ಸನ್ಯಾಸಿ ಬಿಸಿ ಚಹಾದ ಬಟ್ಟಲು ಹಿಡಿದುಕೊಂಡು ಅದೇ […]