ಸಹಿಸಲಾಗದೆ ಹೋದರೆ ಸತ್ಯವೂ ದ್ವೇಷಕ್ಕೆ ಒಳಗಾಗುತ್ತದೆ : ಅಧ್ಯಾತ್ಮ ಡೈರಿ

ತಿರುಳು ಒಂದೇ ಆಗಿದ್ದರೂ ಅದರ ಹೊದಿಕೆಗೆ ತಕ್ಕಂತೆ ನಮ್ಮ ಪ್ರತಿಕ್ರಿಯೆ ಇರುತ್ತದೆ. ಶುಗರ್ ಕೋಟೆಡ್ ಮಾತ್ರೆಗಳ ಹಾಗೆ – ಒಳಗೆ ಕಹಿಯೇ ಇದ್ದರೂ ಅದನ್ನು ಸಾಧ್ಯವಾದಷ್ಟು ಸಹ್ಯಗೊಳಿಸಿಕೊಂಡರಷ್ಟೆ ನಮಗೆ ನುಂಗಲು ಸಾಧ್ಯ ~ ಅಲಾವಿಕಾ  ಬೀರಬಲ್ಲನ ಕಥೆಯೊಂದು ಹೀಗಿದೆ. ಒಮ್ಮೆ ಬೀರಬಲ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ, ಅರಳಿಕಟ್ಟೆಯ ಕೆಳಗೆ ಜ್ಯೋತಿಷಿಯೊಬ್ಬನು ತಲೆ ಹೊತ್ತು ಕುಳಿತಿರೋದನ್ನು ನೋಡ್ತಾನೆ. “ಏನಾಯ್ತು?” ಅಂತ ವಿಚಾರಿಸಿದಾಗ. “ನಾನು ಶ್ರೀಮಂತ ವ್ಯಾಪಾರಿಯೊಬ್ಬನಿಗೆ ಜಾತಕ ನೋಡಿ ಹೇಳಿದೆ. ಅವನು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡು ನನ್ನ ಮೇಲೇರಿ […]