ವೇದ ಪುರಾಣಗಳು ಹೇಳುವ ತ್ರಯತ್ರಿಂಶತಿ ಕೋಟಿ (33 ಕೋಟಿ) ದೇವತೆಗಳು ಮತ್ತು ಅವರ ಹೆಸರು

 ಹಿಂದೂ ಧಾರ್ಮಿಕ ಸಾಹಿತ್ಯದಲ್ಲಿ ಉಲ್ಲೇಖಿಸಲಾಗಿರುವ 33 ಕೋಟಿ ದೇವತೆಗಳು ಯಾರು, ಅವರ ಹೆಸರುಗಳೇನು ಗೊತ್ತೇ!? ಹಿಂದೂ ಧರ್ಮ – ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಉಲ್ಲೇಖವಿದೆ. ಬಹುತೇಕ ಜನರು ಇಲ್ಲಿ ‘ಕೋಟಿ’ ಅಂದರೆ ಸಂಖ್ಯೆ ಅಂದುಕೊಂಡಿದ್ದಾರೆ. ಮತ್ತು 33 ಕೋಟಿ ಹೆಸರುಗಳನ್ನು ಹೇಳಿರೆಂದು ತಾಕೀತು ಮಾಡುತ್ತಾರೆ. ವಾಸ್ತವದಲ್ಲಿ, ಈ ‘ಕೋಟಿ’ ಸಂಖ್ಯೆಯನ್ನು ಸೂಚಿಸುವ ಕೋಟಿಯಲ್ಲ. ಸಂಸ್ಕೃತದಲ್ಲಿ ‘ಕೋಟಿ’ ಅಂದರೆ ‘ವಿಧ’, ‘ವರ್ಗ’ (type) ಎಂಬ ಅರ್ಥವೂ ಇದೆ. ಉದಾ: ಉಚ್ಚಕೋಟಿ. ಇದರ ಅರ್ಥ ಉಚ್ಚ ವರ್ಗಕ್ಕೆ ಸೇರಿದವರು […]