ವಿದಾಯಕ್ಕೆ ಮುನ್ನ ~ ಪ್ರವಾದಿ : ಅಧ್ಯಾಯ 1

ಖಲೀಲ್ ಗಿಬ್ರಾನ್ ತನ್ನ ಅಲೌಕಿಕ ಕೃತಿ “ಪ್ರವಾದಿ” ಯನ್ನು (The Prophet) ಮೊದಲು ರಚಿಸಿದ್ದು ಅರೇಬಿಕ್ ಭಾಷೆಯಲ್ಲಿ; ತನ್ನ ಇಪ್ಪತ್ತರ ಹರೆಯದಲ್ಲಿ! ಆಮೇಲೆ ಇಂಗ್ಲೀಷ್ ಭಾಷೆಗೆ ಅದನ್ನು ತರ್ಜುಮೆ ಮಾಡಿದ್ದೂ ಅವನೇ. ಅಮೇರಿಕೆಯ ಉದ್ದಗಲಕ್ಕೂ “ಪುಟ್ಟ ಕಪ್ಪು ಪುಸ್ತಕ” “ಪುಟ್ಟ ಬೈಬಲ್” ಎಂದು ಈ ಪುಸ್ತಕ ಖ್ಯಾತಿ ಪಡೆಯಿತು. ಈ ಖ್ಯಾತಿಗೆ ತಲೆ ಕೊಡದ ಗಿಬ್ರಾನ್, “ನಾನು ಪ್ರವಾದಿ ಕೃತಿಯನ್ನು ಬರೆಯುತ್ತಿದ್ದಂತೆ, ಪ್ರವಾದಿ ಕೃತಿ ನನ್ನನ್ನು ಬರೆಯಿತು” ಎಂದುಬಿಟ್ಟಿದ್ದ.   ‘ದ ಪ್ರಾಫೆಟ್’ ಕೃತಿಯು ಜಗತ್ತಿನ ಬಹುತೇಕ ಭಾಷೆಗಳಿಗೆ ಅನುವಾದಗೊಂಡಿದ್ದು, […]