ಪ್ರತಿಯೊಂದು ಜೀವಿಯಲ್ಲೂ ‘ನಾರಾಯಣ’ ಇರುವನು!

ಒಮ್ಮೆ ಒಬ್ಬ ಗುರು ತನ್ನ ಶಿಷ್ಯನಿಗೆ ಬೋಧನೆ ಮಾಡುತ್ತಾ, “ಪತ್ರಿಯೊಂದು ಜೀವಿಯಲ್ಲೂ ನಾರಾಯಣ ನೆಲೆಸಿದ್ದಾನೆ” ಎಂದು ಹೇಳಿದರು.  ಗುರುವಿನ ಈ ಮಾತು ಶಿಷ್ಯನ ತಲೆಯಲ್ಲಿ ಅಚ್ಚೊತ್ತಿ ನಿಂತಿತು. ಮರುದಿನ ಆ ಶಿಷ್ಯ ಚಿಕ್ಕದೊಂದು ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಒಂದು ಆನೆ ಬರುತ್ತಿರುವುದು ಕಾಣಿಸಿತು. ಆನೆಯ ಮೇಲಿದ್ದ ಮಾವುತನು ದಾರಿಹೋಕರಿಗೆ  “ಆನೆಗೆ ಮದವೇರಿದೆ, ನನ್ನ ಅಂಕುಶಕ್ಕೂ ಮಣಿಯುತ್ತಿಲ್ಲ, ರಸ್ತೆಯಿಂದ ದೂರ ಸರಿಯಿರಿ” ಎಂದು ಕೂಗಿ ಹೇಳುತ್ತಿದ್ದ. ಶಿಷ್ಯನಿಗೂ ಈ ಕೂಗು ಕೇಳಿಸಿತು. ಆದರೆ ಸಕಲ ಪ್ರಾಣಿಗಳಲ್ಲೂ ನಾರಾಯಣ ನೆಲೆಸಿರುತ್ತಾನೆ, […]