ಮುಕ್ತಿ ಮಾರ್ಗದಲ್ಲಿ ನಡೆಸುವ 7 ಬಗೆಯ ತ್ಯಾಗಗಳು

ನಮ್ಮ ಆಧ್ಯಾತ್ಮ ಶಾಸ್ತ್ರದಲ್ಲಿ ತ್ಯಾಗವನ್ನು ಏಳು ಪ್ರಕಾರಗಳಲ್ಲಿ ವಿಂಗಡಿಸಿದ್ದಾರೆ. ಆ ಎಳು ತ್ಯಾಗಗಳನ್ನು ಪ್ರಪಂಚದ ಪ್ರತಿಯೊಬ್ಬರೂ ಸಹ ಆಚರಿಸಬಹುದಾಗಿದೆ ಹಾಗೂ ತನ್ಮೂಲಕ ಮಾನವ ಜೀವನದ ಸರ್ವೋಚ್ಚ ಪ್ರಯೋಜನವಾದ ಮೋಕ್ಷವನ್ನು ಪಡೆಯಬಹುದಾಗಿದೆ. ಭಾರತೀಯ ಶಾಸ್ತ್ರ, ಸಾಹಿತ್ಯ, ಜಾನಪದ ಮುಂತಾದ ಎಲ್ಲ ಕಡೆಗಳಲ್ಲಿ ಆಧ್ಯಾತ್ಮಿಕ ಸಾಧನೆಯ ಅಂತಿಮ ಪ್ರಯೋಜನವಾದ “ಬಿಡುಗಡೆ”ಯನ್ನು ಮುಕ್ತಿ, ಭಗತ್ಪ್ರಾಪ್ತಿ, ನಿರ್ವಾಣ, ಮೋಕ್ಷ, ಕೈವಲ್ಯ ಮುಂತಾದ ಅನೇಕ ಹೆಸರುಗಳಲ್ಲಿ ವಿವಿಧ ಪ್ರಕಾರಗಳಲ್ಲಿ ಹೇಳಿದ್ದಾರೆ. ಅಂತಹ ಮುಕ್ತಿಯನ್ನು ಪಡೆಯಬೇಕಾದರೆ ಸಾಮಾಜಿಕ ಮತ್ತು ಸಾಂಸಾರಿಕ ಜೀವನವನ್ನು ಬಿಟ್ಟು ಕಾಡಿಗೆ ಹೋಗಿ […]

ಬ್ರಹ್ಮಜ್ಞಾನವೆಂದರೆ ಸುಖ ಸಂತೋಷಗಳನ್ನು ಪಡೆಯುವುದಲ್ಲ : ರಮಣ ಧಾರೆ

ವಾಸ್ತವದಲ್ಲಿ ಸುಖ ಸಂತೋಷಗಳು ನಮ್ಮ ಸಹಜ ಸ್ವಭಾವವೇ ಆಗಿವೆ. ಅದು ನಮ್ಮ ಆತ್ಮವೇ ಆಗಿದೆ. ಅದನ್ನು ಪ್ರತಿಯೊಬ್ಬರೂ ಹುಡುಕುತ್ತಾರೆ, ಕಾರಣ ಅದು ಅವರ ಸ್ವಭಾವ. ಅದು ಅವರ ಆಜನ್ಮಹಕ್ಕು. ಅದನ್ನು ಅವರು ಕಾಣದೇ ಇರಲು ಕಾರಣ, ಅವರು ಯಾವಾಗಲೂ ತಮ್ಮಿಂದ ಹೊರಗೆ ಅದನ್ನು ಹುಡುಕುವುದೇ ಆಗಿದೆ. ಬ್ರಹ್ಮಜ್ಞಾನವೆಂಬುದು ಸಂಪಾದಿಸುವ ವಿದ್ಯೆಯಲ್ಲ. ಬ್ರಹ್ಮಜ್ಞಾನ ಪಡೆಯುವುದರಿಂದ ಸುಖ ಸಂತೋಷಗಳು ಸಿಗುತ್ತವೆ ಎಂದು ನೀವು ಭಾವಿಸುತ್ತೀರಿ. ಇದೊಂದು ತಪ್ಪು ಗ್ರಹಿಕೆ. ನಿಮ್ಮೊಳಗಿರಬಹುದಾದ ಈ ತಪ್ಪುಗ್ರಹಿಕೆ ಹತ್ತು ಜನ ಪೆದ್ದರು ನದಿ ದಾಟಿದಂತಿದೆ. […]