ಸೂರ್ಯವಂಶದ ಅರಸರು | ಸನಾತನ ಸಾಹಿತ್ಯ ~ ಮೂಲಪಾಠಗಳು #36

ಸೂರ್ಯ ವಂಶದ ಆದಿ ಪುರುಷರು ಮತ್ತು ಭರತ ಖಂಡವನಾಳಿದ ಸೂರ್ಯ ವಂಶದ ರಾಜರುಗಳ ಪಟ್ಟಿ ಇಲ್ಲಿದೆ … ನಮ್ಮ ಪ್ರಪ್ರಾಚೀನ ಇತಿಹಾಸದಲ್ಲಿ ಬಹು ಮುಖ್ಯವಾಗಿ ಕೇಳಿಬರುವ ರಾಜ ವಂಶಗಳು- ಸೂರ್ಯ ವಂಶ ಮತ್ತು ಚಂದ್ರ ವಂಶಗಳು. ಹೆಸರೇ ಸೂಚಿಸುವಂತೆ ಸೂರ್ಯ ವಂಶದ ಆದಿ ಸೂರ್ಯನಿಂದಲೇ. ವಿವಸ್ವಾನ- ಕಿರಣಗಳ ಒಡೆಯ- ಸೂರ್ಯ. ಆದ್ದರಿಂದ ಸೂರ್ಯನಿಗೆ ವಿವಸ್ವಂತ ಎನ್ನುವ ಹೆಸರೂ ಇದೆ. ಸೂರ್ಯ ಪುತ್ರರು ವೈವಸ್ವತ ಎಂದು ಕರೆಸಿಕೊಳ್ಳುವರಷ್ಟೆ? ಈ ಪ್ರತಿಯೊಂದು ಮನ್ವಂತರದ ಮೂಲ ಪುರುಷನನ್ನು ‘ಮನು’ ಎಂದು ಕರೆಯಲಾಗುತ್ತದೆ. […]