ಗರುಡನಿಗೂ ಸರ್ಪಗಳಿಗೂ ವೈರವೇಕೆ? ಕದ್ರು ತನ್ನದೇ ಮಕ್ಕಳಿಗೆ ಶಾಪ ಕೊಟ್ಟಿದ್ದೇಕೆ!?

ಪ್ರಜಾಪತಿ ಕಶ್ಯಪನ ಅನೇಕಾನೇಕ ಪತ್ನಿಯರಲ್ಲಿ ಕದ್ರು ಮತ್ತು ವಿನತೆಯೂ ಇದ್ದರು. ಕದ್ರುವಿಗೆ ಸರ್ಪಗಳು ಮಕ್ಕಳಾಗಿ ಹುಟ್ಟಿದರು. ವಿನತೆಗೆ ಅರುಣ ಮತ್ತು ಗರುಡ ಮಕ್ಕಳಾದರು. ಮುಂದೆ ಅಂಗ ನ್ಯೂನತೆಯಿದ್ದ ಅರುಣನು ಸೂರ್ಯನ ಸಾರಥಿಯಾದನು. ಗರುಡನು ಮಹಾಶಕ್ತಿಶಾಲಿಯಾಗಿ ಬೆಳೆದನು. ಕಾಲಾಂತರದಲ್ಲಿ ದೇವಾಸುರರು ಸೇರಿ ಅಮೃತ ಪಡೆಯಲೆಂದು ಸಾಗರ ಮಥನ ನಡೆಸಿದರು. ಅಮೃತಕ್ಕೆ ಮೊದಲು ಹೊರಬಂದ ಅಮೂಲ್ಯ ಉಚ್ಚೈಶ್ರವಸ್ ಎಂಬ ಕುದುರೆಯೂ ಇತ್ತು. ಆ ಕುದುರೆ ಹಾಲಿನಂತೆ ಬೆಳ್ಳಗಿತ್ತು. ಅತ್ಯಾಕರ್ಷವಾಗಿತ್ತು. ಅದನ್ನು ನೋಡಲೆಂದೇ ಮೂರು ಲೋಕಗಳಿಂದ ದೇವ ದಾನವ ಮನುಷ್ಯರೂ ತಂಡೋತಂಡವಾಗಿ […]