ಸುಖ ದುಃಖಗಳು ನಮ್ಮೊಳಗೇ ಇವೆ

ಒಮ್ಮೆ ಒಬ್ಬ ಸೂಫಿ ಸಂತ ರಾಜನಿಗೆ , “ನಾವು ಸುಖ ದುಃಖಗಳನ್ನು ಬೇರೆಯವರಲ್ಲಿ ಹುಡುಕುತ್ತೇವೆ. ವಾಸ್ತವದಲ್ಲಿ ಅವೆಲ್ಲವೂ ನಮ್ಮೊಳಗೇ ಇದೆ” ಎಂದು ಬೋಧಿಸುತ್ತಿದ್ದ. ರಾಜ ಅದನ್ನು ಒಪ್ಪಲಿಲ್ಲ. ಸಂತ ಅದನ್ನು ಸಾಬೀತುಪಡಿಸಲು ಮುಂದಾದ. “ನಿನ್ನ ರಾಜ್ಯದ ಆರೋಗ್ಯವಂತ ಯುವ ಗೃಹಸ್ಥನನ್ನು ಕರೆಸಿ, ಆರು ತಿಂಗಳು ಅವನನ್ನು ಒಂಟಿಯಾಗಿಡು, ಅನಂತರ ಮಾತಾಡೋಣ” ಅಂದ. ರಾಜ ಹಾಗೆಯೇ ಮಾಡಿದ. ನಾಲ್ಕು ದಿನ ತಿಂದುಂಡು ಸುಖವಾಗಿದ್ದ ಯುವ ಗೃಹಸ್ಥ, ಐದನೇ ದಿನಕ್ಕೆ ಗೋಳಿಡತೊಡಗಿದ. ಅವನ ಒಳಗಿನದೇ ಚಿಂತೆಗಳು ಅವನನ್ನು ಮುತ್ತಿ ತಿನ್ನತೊಡಗಿದ್ದವು. […]