ಕೆಂಪು ಜುಟ್ಟಿನ ಹುಂಜ ಮತ್ತು ಅನಾಥ ಅಣ್ಣ ತಂಗಿ : ಒಂದು ರಷ್ಯನ್ ಕಥೆ

ಆಮೇಲೆ, ದಿನದಿನವೂ ಅಣ್ಣ ತಂಗಿ ಥರಥರಾವರಿ ತಿಂಡಿ ತಿನ್ನುತ್ತ ಸುಖವಾಗಿದ್ದರು ಅಂತ ಕಥೆ ಮುಗಿಸಿಬಿಡಬಹುದಿತ್ತು! ಆದರೆ ಹಾಗಾಗಲಿಲ್ಲ!! ಸಂಗ್ರಹ ಮತ್ತು ಅನುವಾದ : ಚೇತನಾ ತೀರ್ಥಹಳ್ಳಿ ಅವರಿಬ್ಬರಿದ್ದರು; ಪುಟಾಣಿ ಅಣ್ಣ, ಪುಟ್ಟ ತಂಗಿ. ಇಬ್ಬರಂದರೆ, ಇಬ್ಬರೇ. ಪೂರಾ ಅನಾಥರು. ಹಾ! ಅವರ ಹತ್ತಿರ  ಕೆಂಪು ಜುಟ್ಟಿನ ಹುಂಜವೊಂದಿತ್ತು. ಅದೆಂದರೆ ಇಬ್ಬರಿಗೂ ಬಹಳ ಪ್ರೀತಿ. ಒಂದು ದಿನ ತಂಗಿಗೆ ವಿಪರೀತ ಹಸಿವಾಯ್ತು. ಮನೇಲಿ ತಿನ್ನಲಿಕ್ಕೆ ಏನೂ ಇಲ್ಲ! ಸರಿ. ಅಣ್ಣ ಮನೆಯ ಮೂಲೆಮೂಲೆ ಹುಡುಕಿದ. ಕಣಜದ ಬುಡದಲ್ಲೊಂದಷ್ಟು ಗೋಧಿಕಾಳು […]