‘ಬುದ್ಧ’ನನ್ನು ಸುಟ್ಟು ಚಳಿ ಕಾಯಿಸಿಕೊಂಡ ಇಕ್ಕಿಯು : ಒಂದು ಝೆನ್ ಕಥೆ

ಇಕ್ಕಿಯು ಒಬ್ಬ ಸುಪ್ರಸಿದ್ಧ ಝೆನ್ ಗುರು. ಒಂದು ಚಳಿಗಾಲದ ಸಂಜೆ ಅವನು ಎಲ್ಲಿಂದ ಎಲ್ಲಿಗೋ ಪ್ರಯಾಣ ಬೆಳೆಸಿದ. ನಡೆಯುತ್ತ ನಡೆಯುತ್ತ ರಾತ್ರಿಯಾಯ್ತು. ರಾತ್ರಿಯಾದಂತೆಲ್ಲ ಚಳಿಯೂ ಹೆಚ್ಚಿತು. ದಾರಿ ಮಧ್ಯ ಸಿಕ್ಕ ಬುದ್ಧ ಮಂದಿರವೊಂದರ ಬಾಗಿಲು ಬಡಿದ ಇಕ್ಕಿಯು, ಅಲ್ಲೇ ಪಡಸಾಲೆಯಲ್ಲಿ ಮಲಗಲು ತನಗೆ ಜಾಗ ಕೊಡಿರೆಂದು ಕೇಳಿದ. ಮಂದಿರದ ಪೂಜಾರಿ ಆಗಲೆಂದು ಹೇಳಿ ಒಂದು ಚಾಪೆ ನೀಡಿದ. ನಡು ರಾತ್ರಿಯ ಹೊತ್ತಿಗೆ ಕಿಟಕಿ ಗಾಜಿನ ಮೇಲೆ ಬೆಂಕಿ ಜ್ವಾಲೆಯ ಪ್ರತಿಫಲನ ಕಂಡು ಹೌಹಾರಿದ ಪೂಜಾರಿ ಗಾಬರಿಯಿಂದ ಹೊರಗೆ […]