ಸಹಜ ಧರ್ಮವನ್ನು ಕಾಪಾಡುವುದು…

ಇಬ್ಬರು ಝೆನ್ ಸನ್ಯಾಸಿಗಳು ನದಿಯಲ್ಲಿ ತಮ್ಮ ಊಟದ ತಟ್ಚೆ ತೊಳೆಯುತ್ತಿದ್ದಾಗ ಒಂದು ಚೇಳು ನದಿಯಲ್ಲಿ ಕೊಚ್ಚಿಕೊಂಡು ಹೋಗುವುದನ್ನು ಕಂಡರು. ಥಟ್ಚನೆ ಒಬ್ಬ ಸನ್ಯಾಸಿ ಅದನ್ನು ನದಿಯಿಂದ ಹೊರ ತೆಗೆದು ದಂಡೆಯ ಮೇಲೆ ಬಿಟ್ಟ. ಹೀಗೆ ಮಾಡುವಾಗ ಚೇಳು ಸನ್ಯಾಸಿಯ ಬೆರಳಿಗೆ ಕಚ್ಚಿಬಿಟ್ಟಿತು. ಸನ್ಯಾಸಿ ತಲೆ ಕೆಡಿಸಿಕೊಳ್ಳದೆ ಮತ್ತೆ ತಟ್ಟೆ ತೊಳೆಯುವುದನ್ನು ಮುಂದುವರೆಸಿದ. ಆ ಚೇಳು ಮತ್ತೆ ಜಾರಿ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗತೊಡಗಿತು. ಆ ಸನ್ಯಾಸಿ ಮತ್ತೆ ಆ ಚೇಳನ್ನು ಎತ್ತಿ ದಂಡೆಯ ಮೇಲೆ ಬಿಟ್ಟ. ಆ […]